ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಿ: ಎಸ್ಪಿ
ಹಾವೇರಿ:ಸೆ.10: ಮಕ್ಕಳು ಅರಳುತ್ತಿರುವ ಹೂವುಗಳು, ಸಮಸ್ಯೆಗಳಿಗೆ ಸಿಕ್ಕು ಬಾಡಿ ಹೋಗದಂತೆ ನಾವುಗಳು ಕಾಳಜಿಯಿಂದ ನೋಡಿಕೊಳ್ಳಬೇಕು. ಇತ್ತೀಚೆಗೆ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು ಇಂತಹ ಸಮಸ್ಯೆಗಳಿಂದ ಮಕ್ಕಳನ್ನು ರಕ್ಷಿಸಬೇಕಾದರೆ ಹೆಚ್ಚು ಹೆಚ್ಚು ಜಾಗೃತಿಯನ್ನು ಮೂಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಅವರು ಹೇಳಿದರು.
ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಆಯೋಜಿಸಿದ "ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಕಾರ್ಯಗಾರ"ದ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಮೇಲಾಗುವ ದೌರ್ಜನ್ಯಗಳ ವಿರುದ್ಧ ಅವರೇ ಧ್ವನಿ ಎತ್ತುವಂತಾಗಬೇಕಾದರೆ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವಲ್ಲಿ ನಾವೆಲ್ಲರೂ ಶ್ರಮಿಸಬೇಕು. ಮಕ್ಕಳಿಗೆ ಸಂಬಂಧಿಸಿದ ಯಾವುದೇ ಪ್ರಕರಣಗಳು ಬಂದರೂ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ದೂರು ದಾಖಲಿಸಿಕೊಳ್ಳಬೇಕು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಧಿಕಾರಿ ಜಗದೀಶ ಅವರು ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ನಾವೆಲ್ಲರೂ ಕೇವಲ ಅಧಿಕಾರಿಗಳಂತೆ ಇರದೇ ಮಕ್ಕಳ ಮನಸ್ಥಿತಿಯನ್ನು ಅರ್ಥಮಾಡಿಕೊಂಡು ಸಮಸ್ಯೆಗಳಿಗೆ ಒಳಗಾದ ಎಲ್ಲಾ ಮಕ್ಕಳನ್ನು ನಮ್ಮ ಮಕ್ಕಳಂತೆ ಜಾಗೃತಿಯಿಂದ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಯಾವುದೇ ಪಾಲಕರು ತಮ್ಮ ಮಕ್ಕಳಿಗಾದ ಅನ್ಯಾಯದ ವಿರುದ್ಧ ಹಾಗೂ ಮಕ್ಕಳು ಕಾಣೆಯಾಗಿರುವ ಕುರಿತು ದೂರು ನೀಡಲು ಬಂದಾಗ ಅವರಿಗೆ ಸಾಂತ್ವಾನ ನೀಡಿ ತಕ್ಷಣವೇ ದೂರು ಸ್ವೀಕರಿಸಬೇಕು ಆಗ ಮಾತ್ರ ಜನಸಾಮಾನ್ಯ ಮತ್ತು ಇಲಾಖೆಗಳ ಸಂಬಂಧಗಳು ಉತ್ತವಾಗಲು ಸಾಧ್ಯ ಎಂದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಹೆಚ್.ಮಜೀದ್ ಹಾಗೂ ಮಕ್ಕಳ ರಕ್ಷಣಾಧಿಕಾರಿ ಪಿ.ವೈ.ಶೆಟ್ಟೆಪ್ಪನವರ, ಡಾ. ರಾಜಶೇಖರ ಮೇಗೇರಿ, ಎಂ.ಆರ್.ಜಾಲಗಾರ, ಮಕ್ಕಳ ಸಹಾಯವಾಣಿಯ ನಿದರ್ೇಶಕಿ ಶ್ರೀಮತಿ ಗೀತಾ ಪಾಟೀಲ್, ಡಿ.ವೈ.ಎಸ್.ಪಿ. ಅನಿಲ್ ಕುಮಾರ್ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 