ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಯ ಸದುಪಯೋಗ ಮಾಡಿಕೊಳ್ಳಿ : ಆರ್ ಬಿ ದಮ್ಮೂರಮಠ
Make good use of government pre-primary school: RB Dammooramath
ತಾಳಿಕೋಟಿ 09: 2026-27 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಈ ಶಾಲೆಯು ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್) ಆಗಿದ್ದು ಇದರ ಅಡಿಯಲ್ಲಿ ಪೂರ್ವ ಪ್ರಾಥಮಿಕ (ಎಲ್ಕೆಜಿ ಯುಕೆಜಿ) ಆಂಗ್ಲ ಮಾಧ್ಯಮದಲ್ಲಿ ಆರಂಭಿಸಲಾಗಿದೆ ಇದರ ಸದುಪಯೋಗವನ್ನು ಮಾಡಿಕೊಳ್ಳಿ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್ ಬಿ ದಮ್ಮೂರಮಠ ಹೇಳಿದರು. ಸೋಮವಾರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಪಬ್ಲಿಕ್ ಶಾಲೆಯ ನೂತನ ವಿಭಾಗದ ಪರಿಚಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಖಾಸಗಿ ಶಾಲೆಯಲ್ಲಿ ಹೆಚ್ಚಿನ ದುಡ್ಡು ಕೊಟ್ಟು ಮಕ್ಕಳಿಗೆ ಶಿಕ್ಷಣ ಕೊಡಿಸಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ ಅಂತವರಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ನೀಡುವ ಈ ಸರ್ಕಾರಿ ಶಾಲೆಗಳು ಹೆಚ್ಚು ಅನುಕೂಲವಾಗುತ್ತವೆ ಎಂದರು.
ಮುಖ್ಯ ಶಿಕ್ಷಕಿ ಡಾ.ಅನೀತಾ ಸಜ್ಜನ ಮಾತನಾಡಿ ನೂತನವಾಗಿ ಆರಂಭಿಸಲಾಗಿರುವ ಆಂಗ್ಲ ಮಾಧ್ಯಮದ ಈ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಉತ್ತಮ ಭೋದಕರು, ಗುಣಮಟ್ಟದ ಶಿಕ್ಷಣದ ಜೊತೆಗೆ ಲ್ಯಾಬಿನ ಸವಲತ್ತೂ ಇರುವುದು ಪಾಲಕರು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದರು. ಇದೇ ಸಂದರ್ಭದಲ್ಲಿ ನೂತನವಾಗಿ ಎಲ್ಕೆಜಿ ವರ್ಗಕ್ಕೆ ದಾಖಲಾದ ಮಕ್ಕಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಎಸ್ ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ಬಿ.ಸಿ.ಮಸರಕಲ್ಲ,ಬಿಆರ್ಸಿ ಕಾಶಿನಾಥ ಸಜ್ಜನ, ಸಿ ಆರ್ಸಿ ರಾಜು ವಿಜಯಪುರ, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 