ನರೇಗಾ ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ.. ದೊಡ್ಡಮನಿ
Make good use of the NREGA scheme.. Big money
ಶಿರಹಟ್ಟಿ 14 : ತಾಲೂಕಿನ ಕೋಗನೂರು ಗ್ರಾ.ಪಂ. ವ್ಯಾಪ್ತಿಯ ಗೋವನಕೊಪ್ಪ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಆರಿ್ವ. ದೊಡ್ಡಮನಿ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದರು. ನಂತರ ಅವರು ಮಾತನಾಡಿ, ನರೇಗಾ ಯೋಜನೆಯಡಿ ಕೂಲಿಕಾರರು ಗ್ರಾಮ ಪಂಚಾಯತಿಗೆ ನಮೂನೆ 6ರಲ್ಲಿ ಕೆಲಸದ ಬೇಡಿಕೆ ಸಲ್ಲಿಸಿ, ಗ್ರಾಮದಲ್ಲಿಯೇ ಕೆಲಸದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಜಾಬ್ ಕಾರ್ಡ್ ಇಲ್ಲದೆ ಇರುವ ಕೂಲಿ ಕಾರ್ಮಿಕರು ತಕ್ಷಣವೇ ದಾಖಲಾತಿಗಳನ್ನು ನೀಡಿ ಹೊಸ ಜಾಬ್ ಕಾರ್ಡ್ಗಳನ್ನು ಪಡೆದುಕೊಂಡು ಯೋಜನೆಯ ಲಾಭವನ್ನು ಪಡೆಯಿರಿ ಎಂದು ಸಲಹೆ ನೀಡಿದರು. ಇದೇ ಸಂರ್ಧಭದಲ್ಲಿ ಬೇಸಿಗೆಯ ಬಿಸಿಲು ಹೆಚ್ಚಾಗಿರುವುದರಿಂದ ಫಲಾನುಭವಿಗಳು ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು. ನಮ್ಮ ದೇಹದ ಆರೋಗ್ಯವು ಬಹು ಮುಖ್ಯವಾಗಿದ್ದು ಹೆಚ್ಚು ನೀರು ಕುಡಿಯಿರಿ ನೀರನ್ನು ಕುದಿಸಿ ಆರಿಸಿ ಕುಡಿಯಿರಿ ಎಂದು ಸಲಹೆ ನೀಡಿದರು.
ಕೂಲಿಕಾರರು ಅಳತೆಗೆ ಅನುಸಾರವಾಗಿ ಕೂಲಿ ಪಾವತಿಯಾಗುತ್ತದೆ. ಅಳತೆಗೆ ತಕ್ಕಂತೆ ಕೆಲಸ ಮಾಡಬೇಕು. ಪ್ರತಿ ದಿನ ಓಒಒಖ. ಎರಡು ಬಾರಿ ಹಾಜರಾತಿ ತೆಗೆದುಕೊಳ್ಳಲಾಗುತ್ತದೆ. ಕೂಲಿಕಾರರು ಎರಡು ಹಾಜರಾತಿಯನ್ನು ಕಡ್ಡಾಯವಾಗಿ ಪಾಲ್ಗೊಂಡು ಹಾಜರಾತಿ ಹಾಕಿಸಬೇಕು. ಒಂದು ವೇಳೆ ಬೆಳಗಿನ ಹಾಜರಾತಿ ಹಾಕಿಸಿ ಮದ್ಯಾಹ್ನದ ಹಾಜರಾತಿ ಹಾಕಿಸದಿದ್ದರೆ ತಮಗೆ ಆ ದಿನದ ಕೂಲಿ ಪಾವತಿಯಾಗುವುದಿಲ್ಲ ಎಂದು ತಿಳಿಸಿದರು.ನರೇಗಾ ಯೋಜನೆಯ ಕಿರು ಪರಿಚಯದ ಜೊತೆಗೆ ಕಾಮಗಾರಿಯ ಭೌತಿಕ ಸ್ಥಿತಿ, ಗುಣಮಟ್ಟವನ್ನು ವೀಕ್ಷಿಸಿ ಇ-ಕೆವೈಸಿ, ಹಾಗೂ ಹಿರಿಯ ನಾಗರಿಕರು,ವಿಕಲಚೇತನರು ಗರ್ಭಿಣಿಯರಿಗೆ ಸ್ಥಳದಲ್ಲಿ ರಿಯಾಯಿತಿಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಲಾಯಿತು. ನಿಮ್ಮ ನೆರೆ ಹೊರೆಯ ಜನರು ಗುಳೆ ಹೋಗದಂತೆ ತಡೆದು ನರೇಗಾ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಮನವಿ ಮಾಡಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ, ನರೇಗಾ ಸಿಬ್ಬಂದಿಗಳು, ಗ್ರಾ.ಪಂ ಸಿಬ್ಬಂದಿಗಳು, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಹಾಜರಿದ್ದರು.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 