ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಮಾಡಿಕೊಳ್ಳಿ: ಕಸನಕ್ಕಿ
Make good use of the employment guarantee scheme: Kasanakki
ತಾಳಿಕೋಟಿ 07: ಬಡವರ ಬಾಳಿಗೆ ಬೆಳಕಾಗಿರುವ, ದುಡಿಯುವ ಕೈಗಳಿಗೆ ಕೆಲಸದೊಂದಿಗೆ ಸಮಾನ ಕೂಲಿಯನ್ನು ಒದಗಿಸುವ ಉದ್ಯೋಗ ಖಾತರಿ ಯೋಜನೆಯ ಸದುಪಯೋಗವನ್ನು ಎಲ್ಲರೂ ಮಾಡಿಕೊಳ್ಳಬೇಕು ಎಂದು ತಾಲೂಕ ಪಂಚಾಯಿತಿಯ ಮನರೇಗಾ ಸಹಾಯಕ ನಿರ್ದೇಶಕ ಪಿ.ಎಸ್.ಕಸನಕ್ಕಿ ಹೇಳಿದರು.
ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತಿಯ ಸಭಾ ಭವನದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೋಜಗಾರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಂಗಳವಾರ ಮಾತನಾಡಿದರು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವುದು ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅರ್ಹ ಪ್ರತಿ ಕುಟುಂಬವು ಉದ್ಯೋಗ ಚೀಟಿ ಹೊಂದುವ ಹಕ್ಕು ಹೊಂದಿರುತ್ತಾರೆ. ಉದ್ಯೋಗ ಚೀಟಿಯಲ್ಲಿ ಹೆಸರಿರುವ ಕುಟುಂಬದ ಎಲ್ಲಾ ವಯಸ್ಕರು, ಅಕುಶಲ ದೈಹಿಕ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಹಕ್ಕುಳ್ಳವರಾಗಿರುತ್ತಾರೆ. ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬ 100 ಮಾನವ ದಿನಗಳ ಕೆಲಸಕ್ಕಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆಯರಿಗೆ ಮತ್ತು ಪುರುಷರಿಗೆ ಸಮಾನ ಕೂಲಿ ಕೆಲಸಕ್ಕೆ ಬೇಡಿಕೆ ಸಲ್ಲಿಸಿದ ಹದಿನೈದು ದಿನದೊಳಗೆ ಕೆಲಸ ನೀಡಲಾಗುವುದು ಎಂದು ತಿಳಿದರು.ನಂತರ ಕೂಲಿಕಾರರಿಂದ ಕೆಲಸದ ಬೇಡಿಕೆಯ ಅರ್ಜಿಯನ್ನು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಶ್ರೀದೇವಿ ಗೂಂಡಾಪೂರ ರವರಿಗೆ ಸಲ್ಲಿಸದರು. ಇದೇ ಸಮಯದಲ್ಲಿ ಹೊಸ ಉದ್ಯೋಗ ಚೀಟಿಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಆರ್.ಎಚ್.ಮೇಟಿ, ಪಿಡಿಓ ಶ್ರೀದೇವಿ ಗುಂಡಾಪೂರ, ತಾಂತ್ರೀಕ ಸಂಯೋಜಕ ಮಹಾಂತೇಶ ಕಿಲಾರಟ್ಟಿ, ಐಇಸಿ ಸಂಯೋಜಕ ಮಲಕಪ್ಪ, ಗ್ರಾ.ಪಂ. ಕಾರ್ಯದರ್ಶಿ ಎಸ್.ಎಂ.ಬಿರಾದಾರ, ಡಿಸಿಓ ಡಿ.ಎಸ್.ಹಿರೇಮಠ, ಬಿಎಫ್ ಟಿ ಲಕ್ಕಪ್ಪ, ಜೆಕೆಎಮ್ ಮಹಾದೇವಿ, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳು, ಗ್ರಾ.ಪಂ. ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 