ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಂಡು ಜ್ಞಾನವಂತರಾಗಿ: ಆರಟ್ಟಿ

ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಂಡು ಜ್ಞಾನವಂತರಾಗಿ: ಆರಟ್ಟಿ

ಗದಗ 24: ಸರ್ಕಾರ ಮಕ್ಕಳಿಗಾಗಿ ಕ್ಷೀರಭಾಗ್ಯ, ಬಿಸಿಯೂಟ, ಶಿಷ್ಯವೇತನ, ಸಮವಸ್ತ್ರ, ಪಠ್ಯಪುಸ್ತಕ ಹೀಗೆ ಅನೇಕ ಯೋಜನೆಗಳನ್ನು ಹೊರತಂದಿದ್ದು ಮಕ್ಕಳು ಇದರ ಸದುಪಯೋಗವನ್ನು ಪಡಿಸಿಕೊಂಡು ಜ್ಞಾನವಂತರಾಗಬೇಕು ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ಇ.ಆರ್. ಆರಟ್ಟಿ ಹೇಳಿದರು.

ಗದಗ ತಾಲೂಕಿನ ಹೊಂಬಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ವಾತರ್ಾ ಮತ್ತು  ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ ಗ್ರಾಮ ಸಂಪರ್ಕ ಯೋಜನೆ ಅಡಿಯಲ್ಲಿ  ಜಾನಪದ ಸಂಗೀತ ಮತ್ತು ಬೀದಿ ನಾಟಕದ ಮೂಲಕ ಸಕರ್ಾರದ ಯೋಜನೆಗಳ  ಕುರಿತು ಜನ ಜಾಗೃತಿ ಮೂಡಿಸುವ ಕ್ಷೇತ್ರ ಪ್ರಚಾರ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. 

ಮಲಪ್ರಭಾ ಸಾಂಸ್ಕೃತಿಕ ಕಲಾ ತಂಡ ಕೊಣ್ಣೂರು ಬೀದಿ ನಾಟಕ ಮತ್ತು ಗಾನತರಂಗ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದಿಗರ ಸಂಸ್ಥೆ ಅಸುಂಡಿ ಜಾನಪದ ಸಂಗೀತ ತಂಡದವರು ಶಾಲೆಯ ಸ್ವಚ್ಛತೆ ಹಾಗೂ ಸರಕಾರದ ಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಿಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ಸಹಶಿಕ್ಷಕರಾದ ಎ.ಎ.ನಧಾಪ್, ಎಸ್.ಬಿ,ಗಾಣಿಗೇರ, ಟಿ.ಟಿ.ಬಿಸನಳ್ಳಿ  ಸಹಶಿಕ್ಷಕಿಯರಾದ ಸಾವಿತ್ರಿಬಾಯಿ ಡಿ.ಎನ್, ವಿ.ಬಿ.ಗುಳಬಾಳ, ಪಿ.ಎಫ್.ನಾಗನೂರ. ಡಿ.ಬಿ.ಗಂಗಾಪುತ್ರ, ವಾರ್ತಾಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.