ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಅಂಬರೀಶ್ ಹುಬ್ಬಳ್ಳಿ
ಯಲಬುರ್ಗಾ 29: ಪಟ್ಟಣ ಪಂಚಾಯತ್ ಮೂಲಕ ವಾರ್ಡಿನ ಎಲ್ಲಾ ನಾಗರೀಕರಿಗೂ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಂಬರೀಶ್ ಹುಬ್ಬಳ್ಳಿ ಹೇಳಿದರು.
ಪಟ್ಟಣದ 6, 9ನೇ ವಾರ್ಡಿನ ವ್ಯಾಪ್ತಿಯ ಆಂಜನೇಯ ದೇವಸ್ಥಾನ ದಿಂದ ಪಾಂಡುರಂಗ ದೇವಸ್ಥಾನದ ವರಗೆ ನಡೆಯುತ್ತಿರುವ ಸುಮಾರು 12ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಪಟ್ಟಣದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ ನಿಗದಿತ ಸಮಯದಲ್ಲಿ ಗುಣಮಟ್ಟದ ಸಿಸಿ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಹೇಳಿದರು.
ನಂತರ 9ನೇ ವಾರ್ಡಿನ ಸದಸ್ಯ ಬಸವಲಿಂಗಪ್ಪ ಕೊತ್ತಲ್ ಮಾತನಾಡಿದ, ರಸ್ತೆ ಅಭಿವೃದ್ಧಿ ಕಾಮಗಾರಿ ಕುರಿತಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಕಾಮಗಾರಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡುವಂತೆ ತಿಳಿಸಲಾಗಿದೆ.ಯಾವುದೇ ಹಂತದಲ್ಲೂ ಕಾಮಗಾರಿಯ ಗುಣಮಟ್ಟದ ಕಳಪೆಯಾಗದಂತೆ ಗುತ್ತುಗೆದಾರರು ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಕಾಮಗಾರಿ ಪ್ರಗತಿ ಸಂದರ್ಭದಲ್ಲಿ ಪೌರಾಯುಕ್ತರು ಪಟ್ಟಣ ಪಂಚಾಯತಗೆ ಸಂಬಂಧಪಟ್ಟ ಇಂಜಿನಿಯರ ಉಸ್ತುವಾರಿಯಲ್ಲಿ ಈ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. 9ನೇ ವಾರ್ಡ್ ವ್ಯಾಪ್ತಿಯಲ್ಲಿ ಇನ್ನೂ ಕೆಲವೆಡೆ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಬೇಡಿಕೆ ಇದ್ದು, ಹಂತ ಹಂತವಾಗಿ ಪೂರೈಸಲಾಗುವುದು. ವಾರ್ಡ್ ವ್ಯಾಪ್ತಿಯಲ್ಲಿ ನೂತನವಾಗಿ ಪಾರ್ಕ್ ನಿರ್ಮಾಣಕ್ಕೆ ಸ್ಥಳವನ್ನು ಉಡುಕಿ ಕಾಮಗಾರಿಗಳಿಗೆ ಚಾಲನೆಯನ್ನು ಈಗಾಗಲೇ ಮಾಡಲಾಗಿದೆ ಮತ್ತು ವಾರ್ಡ್ ಸ್ವಚ್ಚತೆಯ ಬಗ್ಗೆ ಗಮನಹರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಕಳಕಪ್ಪ ತಳವಾರ, ಅಂದಯ್ಯ ಕಳ್ಳಿಮಠ, ಮುಖಂಡ ದೊಡ್ಡಯ್ಯ ಗುರವಿನ, ಶರಣಪ್ಪ ಕೊಡಗಲಿ, ಮಲ್ಲಿಕಾರ್ಜುನ, ಸುರೇಶ ಕೊರಡಿಕೇರಿ, ಗುತ್ತಿಗೆದಾರ ಮಲ್ಲಿಕಾರ್ಜುನ ಹಿರೇಮಠ ಸೇರಿ ವಾರ್ಡಿನ ನಾಗರಿಕರು ಇದ್ದರು.