ಮಲಪ್ರಭಾ ಶುಗರ್ಸ್ : ಪುನಶ್ಚೇತನ ಪ್ಯಾನೆಲ್ ಗೆ ಭರ್ಜರಿ ಗೆಲುವು
Malaprabha Sugars: A huge victory for the Punacchetana panel
ಬೆಳಗಾವಿ 29 : ಭಾರೀ ಕುತೂಹಲ ಮೂಡಿಸಿದ್ದ ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ಪುನಶ್ಚೇತನ ಪ್ಯಾನೆಲ್ ಭರ್ಜರಿ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಬಾಬಾಸಾಹೇಬ ಪಾಟೀಲ, ವಿಠ್ಠಲ ಹಲಗೇಕರ್ ನೇತೃತ್ವದ ಪ್ಯಾನೆಲ್ ನಿಂದ ಸ್ಫರ್ಧಿಸಿದ್ದ ಎಲ್ಲ 15 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ವಿರೋಧಿ ಪ್ಯಾನೆಲ್ ಗಳು ಧೂಳಿಪಟವಾಗಿವೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾರ್ಖಾನೆಯ ಎದುರು ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರೈತರು ನಮ್ಮ ಮೇಲೆ ವಿಶ್ವಾಸವಿಟ್ಟು ಅಭೂತಪೂರ್ವ ಗೆಲುವು ನೀಡಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹಾಗೆಯೇ ಎಲ್ಲ ಕಾರ್ಮಿಕರಿಗೂ ಸಹ ಕೃತಜ್ಞತೆ ಸಲ್ಲಿಸುತ್ತೇವೆ. ಅವರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸುತ್ತೇವೆ ಎಂದರು. ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದು ಖಚಿತ. ಎಲ್ಲರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡಲಾಗುವುದು ಎಂದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 