ಮಲೇಷ್ಯಾ ಮಾಸ್ಟರ್ಸ್: ಕ್ವಾರ್ಟರ್ ಫೈನಲ್ ತಲುಪಿದ ಸೈನಾ ನೆಹ್ವಾಲ್, ಸಿಂಧು
ಕೌಲಾಲಂಪುರ, ಜ 9 ,ಭಾರತದ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿಯರಾದ ಪಿ.ವಿ ಸಿಂಧು ಹಾಗೂ ಸೈನಾ ನೆಹ್ವಾಲ್ ಅವರು ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.ಗುರುವಾರ 38 ನಿಮಿಷಗಳ ಕಾಲ ನಡೆದ ಮಹಿಳೆಯರ ಸಿಂಗಲ್ಸ್ ಪ್ರೀ ಕ್ವಾರ್ಟರ್ ಫೈನಲ್ಸ್ ಹಣಾಹಣಿಯಲ್ಲಿ ಸೈನಾ ನೆಹ್ವಾಲ್ ಅವರು 25-23, 21-12 ಅಂತರದಲ್ಲಿ ಥಾಯ್ಲೆಂಡ್ ನ ಎನ್ ಸಿ ಯಂಗ್ ವಿರುದ್ಧ ಗೆದ್ದು ಅಂತಿಮ ಎಂಟರ ಘಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ. ಮತ್ತೊಂದು ಮಹಿಳೆಯರ ಸಿಂಗಲ್ಸ್ ಅಂತಿಮ 16ರ ಹಂತದ ಪಂದ್ಯದಲ್ಲಿ ಪಾರಮ್ಯ ಮೆರೆದ ಒಲಿಂಪಿಕ್ಸ್ ಬೆಳ್ಳಿ ಪಶಸ್ತಿ ವಿಜೇತೆ ಪಿ.ವಿ ಸಿಂಧು ಅವರು ವಿಶ್ವದ 19ನೇ ಅಯಾ ಒಹೊರಿ ವಿರುದ್ಧ 21-19, 21-15 ಅಂತರದಲ್ಲಿ ಗೆದ್ದು ಕ್ವಾರ್ಟರ್ ಫೈನಲ್ ಗೆ ತಲುಪಿದರು.
2019ರ ವರ್ಷದಲ್ಲಿ ನೀರಸ ಪ್ರದರ್ಶನ ತೋರಿದ್ದ ಸೈನಾ ನೆಹ್ವಾಲ್ 2020ರ ವರ್ಷದಲ್ಲಿ ಕ್ವಾರ್ಟರ್ ಫೈನಲ್ ತಲುಪುವ ಮೂಲಕ ಶುಭಾರಂಭ ಮಾಡಿದ್ದಾರೆ.ಪುರುಷರ ಸಿಂಗಲ್ಸ್ ಹಣಾಹಣಿಯಲ್ಲಿ ಸಮೀರ್ ವರ್ಮಾ ಅವರು ಮಲೇಷ್ಯಾ ಆಟಗಾರ ಲೀ ಝೀ ಜಿಯಾ ಅವರ ವಿರುದ್ಧ 19-21, 20-22 ಅಂತರದಲ್ಲಿ ಸೋತು ಟೂರ್ನಿಯಿಂದ ಹೊರ ನಡೆದರು. ಎರಡೂ ಗೇಮ್ ಗಳಲ್ಲಿ ಭಾರಿ ಫೈಪೋಟಿ ನೀಡಿದ ಭಾರತದ ಆಟಗಾರ ಕೊನೆಯಲ್ಲಿ ಸಣ್ಣ ಅಂತರದಲ್ಲಿ ಸೋತು ನಿರಾಸೆ ಅನುಭವಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 