ಸೌಂದತ್ತಿ

ಅಭಿವೃದ್ಧಿ ಕಾಮಗಾರಿಗಳಿಗೆ ಮಾಮನಿ ಭೂಮಿ ಪೂಜೆ

ಅಭಿವೃದ್ಧಿ ಕಾಮಗಾರಿಗಳಿಗೆ ಮಾಮನಿ ಭೂಮಿ ಪೂಜೆ

ಸವದತ್ತಿ 08: ನೀರಾವರಿ ಕಾಲೋನಿಯ ವಸತಿ ಗೃಹಗಳಲ್ಲಿ ವಾಸಿಸುತ್ತಿರುವ ನೌಕರರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ 27.90ಲಕ್ಷ ರೂ.ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ಸ್ಥಳೀಯ ನೀರಾವರಿ ಕಾಲೋನಿಯಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಲೆಕ್ಕ ಶಿರ್ಷಿಕೆ-2701 ಯೋಜನೆಯಡಿ ರಸ್ತೆ ಡಾಂಬರೀಕರಣ, ಚರಂಡಿ ದುರಸ್ತಿ, ಸೇಪ್ಟಿಕ್ ಟ್ಯಾಂಕ್ ಅಳವಡಿಸುವ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಸರಕಾರಿ ವಸತಿ ಗೃಹಗಳಲ್ಲಿ ವಾಸಿಸುತ್ತಿರುವ ನೌಕರರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದರು.

ಪಿಎಲ್‍ಡಿ ಬ್ಯಾಂಕ ಅಧ್ಯಕ್ಷ ಜಗದೀಶ ಶಿಂತ್ರಿ, ಬಸವರಾಜ ಕಾರದಗಿ, ಪುರಸಭೆ ಸದಸ್ಯರಾದ ಅರ್ಜುನ ಅಮ್ಮೋಜಿ, ಯಲ್ಲಪ್ಪ ರುದ್ರಾಕ್ಷಿ, ಶ್ರೀಶೈಲ್ ಕತ್ತಿ, ಉಪತಹಸೀಲ್ದಾರ ಎಮ್.ವಿ.ಗುಂಡಪ್ಪಗೋಳ, ಹನಮಂತ ಪೆಟ್ಲೂರ, ಅಶೋಕ ಮೇಟಿ, ಫಕೀರಪ್ಪ ಅಡರಗಟ್ಟಿ ಹಾಗೂ ನೀರಾವರಿ ಕಾಲೋನಿಯ ನಿವಾಸಿಗಳು ಉಪಸ್ಥಿತರಿದ್ದರು.

ಸುದ್ದಿ ಓದಿ