ಬಳ್ಳಾರಿ 7: ಜಿಲ್ಲೆಯ ಕಂಪ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಶ್ರೀಮತಿ ಮಮತ ಜಿ.ಎಂ, ಅವರಿಗೆ ಬಳ್ಳಾರಿಯ ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ಘೋಷಿಸಿದೆ.
ಮಮತ ಜಿ.ಎಂ. ಅವರು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಭೀಮನಗೌಡ ಅವರ ಮಾರ್ಗದರ್ಶನದಲ್ಲಿ “ಡೆವಲಪ್ಮೆಂಟ್ ಆಫ್ ಇಂಡಿಯನ್ ಬಾಂಡ್ ಮಾರ್ಕೆಟ್- ಆ್ಯನ್ ಎಕ್ಸ್ಟೆನ್ಸಿವ್ ಸ್ಟಡೀ” ಎಂಬ ಶೀರ್ಷಿಕೆಯಡಿ ಸಂಶೋಧನೆ ನಡೆಸಿ ಸಿದ್ಧಪಡಿಸಿದ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ಘೋಷಿಸಿದೆ.
ಇವರನ್ನು ಕಂಪ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.