ತಂದೆಗೆ ಅವಮಾನ ಮಾಡಿದ ವಿಚಾರಕ್ಕೆ ಜಗಳ: ಕಲ್ಲಿನಿಂದ ಹೊಡೆದು ವ್ಯಕ್ತಿಯ ಹತ್ಯೆ
Man Killed With Stone in Gondia After Alleged Dispute Over Father's Insult
ಗೊಂಡಿಯಾ, ಆಗಸ್ಟ್ 29: ತಂದೆಗೆ ಅವಮಾನ ಮಾಡಿದ ವಿಚಾರವಾಗಿ ಉಂಟಾದ ಜಗಳದ ಹಿನ್ನೆಲೆಯಲ್ಲಿ 32 ವರ್ಷದ ವ್ಯಕ್ತಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮೃತರನ್ನು ನವಾಟೋಲಾ ಗ್ರಾಮದ ನಿವಾಸಿ ಮಿಥುನ್ ಭಯ್ಯಾಲಾಲ್ ಠಾಕ್ರೆ (32) ಎಂದು ಗುರುತಿಸಲಾಗಿದೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗೂರ್ ಬಗಿಯಾ ರಸ್ತೆಯ ಏಕದಂತ್ ಕಾಲೋನಿ ಬಳಿ ಮಧ್ಯರಾತ್ರಿಯ ನಂತರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮಿಥುನ್ ಅವರು ಆರೋಪಿ ಸಂದೀಪ್ ಮೆಶ್ರಾಮ್ (42) ಅವರ ತಂದೆಯನ್ನು ನಿಂದಿಸಿ, ಅವರೊಂದಿಗೆ ಕೈಕೈ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಸಂದೀಪ್, ತಂದೆಗೆ ಅವಮಾನ ಮಾಡಿದ್ದಕ್ಕಾಗಿ ಮಿಥುನ್ ಅವರೊಂದಿಗೆ ಜಗಳವಾಡಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಭಾರವಾದ ನೆಲದ ಕಲ್ಲಿನಿಂದ ಸಂದೀಪ್ ಅವರು ಮಿಥುನ್ ಅವರ ತಲೆಗೆ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಿಥುನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ಲಭಿಸಿದ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಕಲ್ಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ತರ ಸಹೋದರ ನೀಲೇಶ್ವರ ಠಾಕ್ರೆ ನೀಡಿದ ದೂರಿನ ಆಧಾರದ ಮೇಲೆ ರಾಮನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಸಂದೀಪ್ ಮೆಶ್ರಾಮ್ ಅವರನ್ನು ಬಂಧಿಸಿದ್ದಾರೆ.
ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 