ಕೃಷ್ಣಾ ನದಿಗೆ ಬಿದ್ದು ವ್ಯಕ್ತಿ ಸಾವು
Man dies after falling into Krishna river
ಲೋಕದರ್ಶನ ವರದಿ
ಜಮಖಂಡಿ 03: ತಾಲೂಕಿನ ಜಂಬಗಿ ಗ್ರಾಮದ ಕೃಷ್ಣಾ ನದಿಯಲ್ಲಿ ವ್ಯಕ್ತಿಯೊರ್ವನು ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಜಮಖಂಡಿ ನಗರದ ಜಯನಗರ ಕಾಲೋನಿಯ ನಿವಾಸಿ ಶೇರಾಅಲ್ಲಿ ಮುಲ್ಲಾ ನದಿಯಲ್ಲಿ ಮುಳುಗಿ ಸಾವನ್ನಪಿದ್ದ ವ್ಯಕ್ತಿ. ಸೇಂಟ್ರಿಂಗ್ ಕಾಮಗಾರಿ ಕೆಲಸವನ್ನು ಮಾಡುತ್ತಿದ್ದ ಎಂದು ಗುರುತಿಸಲಾಗಿದ್ದು. ಜಂಬಗಿ ಸೇತುವೆಯ ಕೃಷ್ಣಾ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಸಾವಳಗಿ ಹಾಗೂ ಜಮಖಂಡಿ ಗ್ರಾಮೀಣ ಪೋಲಿಸರು ಭೇಟಿ ನೀಡಿ ಶವವನ್ನು ನದಿಯಿಂದ ಮೇಲಕ್ಕೆತ್ತು ಕಾರ್ಯಕ್ಕೆ ಮುಂದಾದ ಬಳಿಕ. ಶವ ಪತ್ತೆಗಾಗಿ ಗ್ರಾಮಸ್ಥರ ಬಗ್ಗೆ ಮಾಹಿತಿ ತಿಳಿದುಕೊಳುವಷ್ಟರಲ್ಲಿ ಸಾವನ್ನಪ್ಪಿರುವ ವ್ಯಕ್ತಿಯ ಪುತ್ರ ಸ್ಥಳಕ್ಕೆ ಬಂದು ನಮ್ಮ ತಂದೆಯ ಶವ ಎಂದು ಪೋಲಿಸರಿಗೆ ಮಾಹಿತಿಯನ್ನು ನೀಡಿದ್ದಾನೆ.
ಈ ಕುರಿತು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ. ಇನ್ನೂ ಯಾವ ಕಾರಣಕ್ಕಾಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂಬುವುದು ಪೋಲಿಸರಿಂದ ನಿಖರವಾದ ಮಾಹಿತಿ ದೊರೆಯಬೇಕಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 