ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ
ಕೊಲ್ಹಾರ 06: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಪಟ್ಟಣದ ಹೊರವಲಯ ಪೌಜಿ ಧಾಬಾ ಹತ್ತಿರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬಬಲೇಶ್ವರ ತಾಲೂಕಿನ ಹಂಗರಗಿ ಗ್ರಾಮದ ಶಂಕ್ರ್ಪ ಹುಚ್ಚಪ ಗೂಳಿ (45) ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಪೌಜಿ ದಾಬಾ ದಿಂದ ಹಂಗರಗಿಗೆ ರಸ್ತೆ ಮೂಲಕ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಸ್ಥಳಕ್ಕೆ ಕೊಲ್ಹಾರ ಪೋಲಿಸ ಠಾಣೆಯ ಪಿಎಸ್‌ಐ ಅಶೋಕ ನಾಯಕ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು ತನಿಖೆ ಕೈಗೊಂಡಿದ್ದಾರೆ