ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ

ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಬೆಳಗಾವಿ : ಮನೆಯ ಹಿಂಭಾಗದ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊAಡ ಘಟನೆ ಜಿಲ್ಲೆಯ ಖಾನಾಪೂರ ತಾಲೂಕಿನ ತೋಲಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಅಮೀರ್ ಹುಸೇನ್ ಪಾಶ್ಚಾಪುರ (48) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಅದೇ ಗ್ರಾಮದ ಅಶೋಕ ರಾಮಾ ಉಗರಖೋಡ(28) ಎಂಬಾತನನ್ನು ನಂದಗಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮನೆಯ ಹಿಂಭಾಗದ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಮಂಗಳವಾರ ಬೆಳಿಗ್ಗೆ ಇದೇ ವಿಷಯಕ್ಕೆ ಸಂಬAಧಿಸಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಅದು ಬಳಿಕ ಹಲ್ಲೆ ಹಾಗೂ ಕೊಲೆಯಲ್ಲಿ ಅಂತ್ಯಗೊAಡಿದೆ.
ಜಗಳದ ವೇಳೆ ಆರೋಪಿ ಅಶೋಕ ಕೈಗೆ ಸಿಕ್ಕ ಪಿಕಾಸಿಯಿಂದ ಅಮೀರ್ ಹುಸೇನ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ತೀವ್ರವಾಗಿ ಗಾಯಗೊಂಡ ಅಮೀರ್ ಹುಸೇನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂದಗಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಸುದ್ದಿ ಓದಿ