ಮಂಜುಳಾ ಐರೋಡಗಿ ರಾಜ್ಯ ಮಟ್ಟಕ್ಕೆ ಆಯ್ಕೆ
ಇಂಡಿ: ವಿಜಯಪುರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನ.15ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮೇಲಾಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ನಾದ ಕೆ.ಡಿ ಶಾಲೆಯ ಒಂಬತ್ತನೆಯ ತರಗತಿಯ ವಿದ್ಯಾರ್ಥಿನಿ ಮಂಜುಳಾ ಐರೊಡಗಿ ಮೂರು ಸಾವಿರ ಮೀಟರ್ ಓಟದಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಮುಖ್ಯ ಶಿಕ್ಷಕ ಸಿ. ಎಂ. ಬಂಡಗರ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದು, ಸರಕಾರಿ ಪ್ರೌಢಶಾಲೆ ಯಲ್ಲಿ ಅದು ಗ್ರಾಮೀಣ ಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಇಂತಹ ಅಪರೂಪದ ಸಾಧನೆ ಮಾಡಿದ್ದು ನಮಗೆಲ್ಲ ಹೆಮ್ಮೆ ತಂದಿದೆ. ವಿದ್ಯಾರ್ಥಿನಿ ರಾಜ್ಯ ಮಟ್ಟದಲ್ಲಿ ಜಯಶಾಲಿ ಆಗಲಿ ಎಂದು ಶುಭ ಹಾರೈಸಿದ್ದಾರೆ.
ಅದೇ ಶಾಲೆಯ ವಿದ್ಯಾರ್ಥಿ ಶಿವರಾಯ ಕಾಂಬ್ಳೆ ಹತ್ತನೇ ತರಗತಿ ಈತನು ಉದ್ದ ಜಿಗಿತದಲ್ಲಿ ಮೂರನೇ ಸ್ಥಾನ ಗಳಿಸಿದ್ದಾನೆ. ಇಬ್ಬರೂ ವಿದ್ಯಾರ್ಥಿಗಳಿಗೆ ಹಾಗೂ ಅವರಿಗೆ ಮಾರ್ಗದರ್ಶನ ಮಾಡಿದ ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಸ್. ಹಚಡದ ಅವರಿಗೆ ಶಾಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.