ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಅವಿರೋಧ ಆಯ್ಕೆ
ಮುಂಡಗೋಡ:ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯತ ನೂತನ ಅಧ್ಯಕ್ಷರಾಗಿ ಮಂಜುನಾಥ ಕಟಗಿ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.
ಮೊದಲ ಅವಧಿಗೆ ಇದ್ದ ಅಧ್ಯಕ್ಷೆ ನೇತ್ರಾವತಿ ಬಿಸವಣ್ಣವರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚುನಾವಣೆ ಪ್ರಕ್ರಿಯೆ ಜರುಗಿತು. 13 ಮಂದಿ ಸದಸ್ಯರಿರುವ ಗ್ರಾಮ ಪಂಚಾಯತ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಮಂಜುನಾಥ ಕಟಗಿ ಒಬ್ಬರೆ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ ಅವರನ್ನು ಅವಿರೋಧ ಆಯ್ಕೆ ಮಾಡಿ ಘೋಷಣೆ ಮಾಡಲಾಯಿತು. 4 ಬಾರಿ ಆಯ್ಕೆಯಾಗಿ ಒಮ್ಮೆ ಅವರು ಉಪಾಧ್ಯಕ್ಷರಾಗಿದ್ದರು. 4ನೇ ಬಾರಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸಿದ್ದರು. ಆಗ ನೇತ್ರಾವತಿ ಬಿಸವಣ್ಣವರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2ನೇ ಅವಧಿಗೆ ಅಧ್ಯಕ್ಷರಾಗಿ ಮಂಜುನಾಥ ಕಟಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಸಹಾಯಕ ನಿರ್ದೇಶಕ ಕೃಷ್ಣ ಕೋಳುರ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ, ಬಿಜೆಪಿ ತಾಲೂಕು ಅಧ್ಯಕ್ಷ ನಾಗಭೂಷಣ ಹಾವಣಗಿ, ಉಮೇಶ ಬಿಜಾಪುರ, ಗುಡ್ಡಪ್ಪ ಕಾತೂರ, ಪರಶುರಾಮ ತಹಶೀಲ್ದಾರ, ವೈ.ಪಿ.ಪಾಟೀಲ, ದೇವು ಪಾಟೀಲ, ಕೆಂಜೋಡಿ ಗಲಬಿ, ಪಿ.ಜಿ.ಪಾಟೀಲ, ಯಾಕೂಬ ಯಲಿವಾಳ, ಪ್ರದೀಪ ಚವ್ಹಾಣ, ರಾಘವೇಂದ್ರ ಟಪಾಲದವರ, ಪೀರಣ್ಣ ನ್ಯಾಸರ್ಗಿ, ರಾಮು ವಾಲ್ಮೀಕಿ, ನಿಂಗಜ್ಜಾ ಕೋಣನಕೇರಿ, ಮೌಲಾಲಿ ನದಾಫ್ ಹಾಗೂ ಮುಂತಾದವರು ಉಪಸ್ಥಿತರಿದ್ದರು. ಸಿಪಿಐ ಎಸ್.ಎಸ್.ಸಿಮಾನಿ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರಿ್ಡಸಲಾಗಿತ್ತು.