ಅಥಣಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಮಾನಸಿಂಗ್ ಮಗರ್ ಅವಿರೋಧ ಆಯ್ಕೆ
Mansingh Magar elected unopposed as chairman of Athani PLD Bank
ಅಥಣಿ 12 : ಅಥಣಿ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ಡಿ) ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಮಾನಸಿಂಗ್ ತಮ್ಮಣ್ಣ ಮಗರ್ ಹಾಗೂ ಉಪಾಧ್ಯಕ್ಷರಾಗಿ ರವೀಂದ್ರ ಗಾಣಿಗೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಹಕಾರ ಇಲಾಖೆಯ ಅಧಿಕಾರಿಗಳು ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರ್ಪ ಸವದಿ, ಹಿಂದಿನ ಅಧ್ಯಕ್ಷ ದುಂಡಪ್ಪ ಆಸ್ಕಿ ಅವರ ಅವಧಿಯಲ್ಲಿ ಬ್ಯಾಂಕ್ನ ಆರ್ಥಿಕ ಸ್ಥಿತಿ ಸುಧಾರಣೆಯಾಗಿದ್ದು, ನಷ್ಟದಲ್ಲಿದ್ದ ಬ್ಯಾಂಕ್ ಲಾಭದತ್ತ ಸಾಗಲು ಸಾಧ್ಯವಾಗಿದೆ ಎಂದು ಹೇಳಿದರು. ಹೊಸ ಕಟ್ಟಡ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿರುವುದನ್ನು ಅವರು ಉಲ್ಲೇಖಿಸಿದರು.
ನೂತನ ಅಧ್ಯಕ್ಷ ಮಾನಸಿಂಗ್ ಮಗರ್ ಮಾತನಾಡಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಮತ್ತು ಕಾಗವಾಡ ಶಾಸಕ ರಾಜು ಕಾಗೆ ಅವರ ಸಹಕಾರದಿಂದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲು ಸಾಧ್ಯವಾಗಿದೆ ಎಂದು ಹೇಳಿದರು. ಬ್ಯಾಂಕ್ನ ಅಭಿವೃದ್ಧಿಗಾಗಿ ನಿರ್ದೇಶಕ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಯ ಸಹಕಾರ ಅಗತ್ಯವಾಗಿದ್ದು, ರೈತಪರ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಮಾಜಿ ಅಧ್ಯಕ್ಷ ದುಂಡಪ್ಪ ಆಸ್ಕಿ ಮಾತನಾಡಿ, ತಮ್ಮ ಅವಧಿಯಲ್ಲಿ ಸಾಲ ವಸೂಲಾತಿಗೆ ಹೆಚ್ಚಿನ ಒತ್ತು ನೀಡಿದ್ದರಿಂದ ಬ್ಯಾಂಕ್ ಆರ್ಥಿಕವಾಗಿ ಸದೃಢಗೊಂಡಿದೆ ಎಂದು ತಿಳಿಸಿದರು. ಬ್ಯಾಂಕ್ಗೆ ಮಂಜೂರಾಗಿರುವ ಅನುದಾನದ ಮೂಲಕ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಿರ್ದೇಶಕ ಮಂಡಳಿ ಸದಸ್ಯರು, ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅನೇಕ ಸದಸ್ಯರು ಉಪಸ್ಥಿತರಿದ್ದು, ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿ ಅಭಿನಂದಿಸಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 