ಹಿರಿಯ-ಕಿರಿಯರ ಎರಡೂ ವಿಭಾಗಗಳಲ್ಲಿ ಚಿನ್ನ ಗೆದ್ದ ಮನು ಭಾಕರ್
ತಿರುವನಂತಪುರಂ, ಫೆ 5 ,ಯುವ ಪ್ರತಿಭೆ ಮನು ಭಾಕರ್ ಅವರು ಇಲ್ಲಿ ನಡೆಯುತ್ತಿರುವ ನ್ಯಾಷನಲ್ ಶೂಟಿಂಗ್ ಟ್ರಯಲ್ಸ್‌ನ ಮಹಿಳೆಯರ 25 ಮೀ ಪಿಸ್ತೂಲ್ ಹಾಗೂ ಕಿರಿಯರ 25 ಮೀ. ಪಿಸ್ತೂಲ್ ಟಿ-2 ವಿಭಾಗಗಳಲ್ಲಿ ಎರಡು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಕಾಮನ್‌ವೆಲ್ತ್ ಕ್ರೀಡಾಕೂಟದ ಚಾಂಪಿಯನ್ ಮನು ಭಾಕರ್, ಎರಡೂ ವಿಭಾಗಗಳಲ್ಲಿ 584 ಅಂಕಗಳನ್ನು ಕಲೆ ಹಾಕಿದ್ದಾರೆ. ಮಹಿಳೆಯರ ವಿಭಾಗದ ಅಂತಿಮ ಸುತ್ತಿನಲ್ಲಿ 32 ಅಂಕ ಪಡೆದು ಮೊದಲ ಸ್ಥಾನ ಪಡೆದರು. ಮಹಾರಾಷ್ಟ್ರದ ಅಭಿದ್ನ್ಯಾ ಅಶೋಕ್ ಪಾಟೀಲ್ 28 ಶಾಟ್‌ಗಳ ಮೂಲಕ ಎರಡನೇ ಸ್ಥಾನ ಪಡೆದರು. ರಾಜ್ಯದ ಸಹ ಶೂಟಿಂಗ್ ಪಟು ಗೌರಿ ಶೆರನ್ 24 ಶಾಟ್ ಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಕಿರಿಯರ ಅಂತಿಮ ಸುತ್ತಿನಲ್ಲಿ ಮನು ಭಾಕರ್ 30 ಅಂಕ ಕಲೆ ಹಾಕಿ ಚಿನ್ನಕ್ಕೆ ಮುತ್ತಿಟ್ಟರು. ರಿಥಮ್ ಸಂಗ್ವನ್ 27 ಶಾಟ್ ಗಳೊಂದಿಗೆ ಬೆಳ್ಳಿ ಪದಕ ಪಡೆದರು. ವಿಭೂತಿ ಭಾಟಿಯಾ 25ರೊಂದಿಗೆ ಕಂಚಿನ ಪದಕಕ್ಕೆ ಸಮಾಧಾನಗೊಂಡರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 