ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಮರಡಿ ಆಯ್ಕೆ
ಯರಗಟ್ಟಿ 06: ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಯರಗಟ್ಟಿ ತಾಲೂಕಿನ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಜೀವಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳಾದ ವಿ. ಎಮ್. ಮರಡಿ ಆಯ್ಕೆಯಾಗಿದ್ದಾರೆ.ಯರಗಟ್ಟಿ, ಸುತ್ತಮುತ್ತಲಿನ ಗ್ರಾಮಗಳಲ್ಲಿ ಶಿಕ್ಷಕರಾಗಿ 32ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮತ್ತು ವೀರಶೈವ ಲಿಂಗಾಯತ ಯುವ ವೇದಿಕೆ ಸೇರಿದಂತೆ ಯರಗಟ್ಟಿ ಪಟ್ಟಣದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.