ಮಾರುಕಟ್ಟೆ ಬಂಡವಾಳೀಕರಣ ಹೆಚ್ ಡಿ ಎಫ್ ಸಿ ಬ್ಯಾಂಕ್ ಸಾಧನೆ
ಮುಂಬೈ, ನ 15 : ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಎಚ್ ಡಿ ಎಫ್ ಸಿ ಬ್ಯಾಂಕ್ ಮತ್ತೊಂದು ಸಾಧನೆಯನ್ನು ತನ್ನ ಮುಡಿಗೇರಿಸಿಮೊಂಡಿದೆ.
ಮಾರುಕಟ್ಟೆ ಬಂಡವಾಳೀಕರಣ ವಿಷಯದಲ್ಲಿ ಹೆಚ್ ಡಿ ಎಫ್ ಸಿ ದೇಶದ ಮೂರನೇ ಅತಿದೊಡ್ಡ ಸಂಸ್ಥೆಯಾಗಿದೆ. 7 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳವನ್ನು ಬ್ಯಾಂಕ್ ಮೀರಿದೆ.
ರಿಲಯನ್ಸ್ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ನಂತರದ ಮೂರನೇ ಭಾರತೀಯ ಸಂಸ್ಥೆ ಎಂಬ ಹೆಗ್ಗಳಿಕೆ ಪಡದುಕೊಂಡಿದೆ. ಅಲ್ಲದೆ, ಈ ಸಾಧನೆ ಮಾಡಿದ ಮೊದಲ ಬ್ಯಾಂಕ್ ಎಂಬ ಗೌರವಕ್ಕೂ ಪಾತ್ರವಾಗಿದೆ.
ಇಲ್ಲಿಯವರೆಗೆ, ರಿಲಯನ್ಸ್ ಇಂಡಸ್ಟ್ರೀಸ್ ( ಆರ್ ಐ ಲ್) ಮತ್ತು ಟಿಸಿಎಸ್ ಸಂಸ್ಥೆಗಳು ಮಾತ್ರ ಈ ಮೈಲಿಗಲ್ಲು ಸಾಧಿಸಿದ್ದವು. 9.38 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳೀಕರಣದೊಂದಿಗೆ, ಆರ್ಐಎಲ್ ಕಂಪನಿ ಮೊದಲ ಸ್ಥಾನದಲ್ಲಿದ್ದು, 8.28 ಲಕ್ಷ ಕೋಟಿ ರೂ ಬಂಡವಾಳೀಕರಣದೊಂದಿಗೆ ಟಿಸಿಎಸ್ ಎರಡನೇ ಸ್ಥಾನದಲ್ಲಿದೆ. ಎಚ್ಡಿಎಫ್ಸಿ ಬ್ಯಾಂಕಿನ ಮಾರುಕಟ್ಟೆ ಬಂಡವಾಳೀಕರಣ ಮೊದಲ ಬಾರಿಗೆ 7,01,730.21 (7.01 ಲಕ್ಷ ಕೋಟಿ) ದಾಟಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 