ಮರಿಯಮ್ಮನಹಳ್ಳಿ ಪಟ್ಟಣದ ಜೋಡಿ ರಥೋತ್ಸವ ನಿಷೇಧ
ಹೊಸಪೇಟೆ 03: ಕೋವಿಡ್ 2ನೇ ಅಲೆ ತಡೆಗಟ್ಟುವ ಉದ್ದೇಶದಿಂದ ಸಭೆ-ಸಮಾರಂಭಗಳಲ್ಲಿ ಸಾರ್ವಜನಿಕರು ಗುಂಪುಗೂಡುವಿಕೆ ನಿಷೇಧಿಸಿ ಜಿಲ್ಲಾದಂಡಾಧಿಕಾರಿಗಳು ಆದೇಶ ಹೊರಡಿಸಿರುವುದರಿಂದ ಮರಿಯಮ್ಮನಹಳ್ಳಿ ಪಟ್ಟಣದ ಜೋಡಿ ರಥೋತ್ಸವನ್ನು ನಿಷೇಧಿಸಲಾಗುವುದು ಎಂದು ಮರಿಯಮ್ಮನಹಳ್ಳಿಯ ಮುಖಂಡರರಿಗೆ ಹೊಸಪೇಟೆ ತಹಸೀಲ್ದಾರ್ ಹೆಚ್.ವಿಶ್ವನಾಥ್ ಅವರು ತಿಳಿಸಿದರು.
ಹೊಸಪೇಟೆ ತಾಲ್ಲೂಕು ಕಚೇರಿಯ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಮರಿಯಮ್ಮನಹಳ್ಳಿಯ ಶ್ರೀ ಲಕ್ಷೀ ನಾರಾಯಣ ಸ್ವಾಮಿ ಹಾಗೂ ಶ್ರೀ ಆಂಜನೇಯ ಸ್ವಾಮಿಯ ವಾರ್ಷಿಕ ಜೋಡಿ ರಥೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಆದೇಶದಂತೆ ಸಾಮಾಜಿಕ, ಧಾರ್ಮಿಕ ಹಾಗೂ ಜಾತ್ರಾ ಸಮಾರಂಭಗಳಿಗೆ ನಿಷೇಧಿಸಿದ್ದು, ಮರಿಯಮ್ಮನಹಳ್ಳಿ ವಾರ್ಷಿಕ ಜೋಡಿ ರಥೋತ್ಸವವನ್ನು ಸಹ ರದ್ದುಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಕಾಶ್ ರಾವ್, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಮರಿಯಮ್ಮನಹಳ್ಳಿ ಪಟ್ಟಣದ ಮುಖಂಡರು ಮತ್ತು ಇತತರು ಇದ್ದರು.