11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ
Mass rally to mark the 11th National Ayurveda Day
ಲೋಕದರ್ಶನ ವರದಿ
ಬೆಳಗಾವಿ 22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ಬೆಳಗಾವಿ ಹಾಗೂ ಐಸಿಎಂಆರ್‌ಹಿಎನ್‌ಐಟಿಎಂ ಮತ್ತು ಜಿಲ್ಲೆಯ ವಿವಿಧ ಆಯುಷ್ ವೈದ್ಯಕೀಯ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಮಂಗಳವಾರ (ಸೆ.22) 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ಬೃಹತ್ ಜಾಥಾ ಕಾರ್ಯಕ್ರಮ ಜರುಗಿತು.ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರ್ಪನವರ ಹಾಗೂ ಕೆಎಲ್‌ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಸುಹಾಸ್ ಶೆಟ್ಟಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಧರ್ಮವೀರ ಸಂಭಾಜಿ ವೃತ್ತ (ಬೋಗಾರ್ವೇಸ್) ವರೆಗೆ ಬೃಹತ್ ಜಾಥಾ ಜರುಗಿತು. ಜಾಥಾದಲ್ಲಿ ಆಯುರ್ವೇದ ಮತ್ತು ಆಯುಷ್ ಪದ್ಧತಿಗಳ ಮಹತ್ವ ಸಾರುವ ಫಲಕಗಳನ್ನು ಹಿಡಿದು, ಆರೋಗ್ಯಕರ ಜೀವನಶೈಲಿಯ ಸಂದೇಶಗಳನ್ನು ಜನರಿಗೆ ತಲುಪಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಆಯುಷ್ ಇಲಾಖೆ ವೈದ್ಯರು, ಸಿಬ್ಬಂದಿಗಳು ಹಾಗೂ ವಿವಿಧ ಆಯುಷ್ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಜಾಥಾದಲ್ಲಿ ಭಾಗವಹಿಸಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 