ಸೌಂದತ್ತಿ

ಬರ ಪರಿಹಾರ, ಸಾಲ ಮನ್ನಾ ಹಾಗೂ ಕಬ್ಬಿಗೆ ಹೆಚ್ಚಿನ ದರಕ್ಕಾಗಿ ರೈತರ ಬೃಹತ್ ಪ್ರತಿಭಟನೆ

ಬರ ಪರಿಹಾರ, ಸಾಲ ಮನ್ನಾ ಹಾಗೂ ಕಬ್ಬಿಗೆ ಹೆಚ್ಚಿನ ದರಕ್ಕಾಗಿ ರೈತರ ಬೃಹತ್ ಪ್ರತಿಭಟನೆ

ಸವದತ್ತಿ 14 : ರಾಜ್ಯದಲ್ಲಿ ತೀವ್ರಗೊಂಡಿರುವ ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು, ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಕಬ್ಬು ಬೆಳೆಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ, ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನಗರದ ಎಪಿಎಂಸಿ ಸರ್ಕಲ್ನಲ್ಲಿ ಬುಧವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.ಕೃಷಿಕ ಸಮಾಜ, ನವದೆಹಲಿ ರೈತ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಭಾರತೀಯ ಕಿಸಾನ್ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಈ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು.ವಿವಿಧ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾಕಾರರು ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಅವರ ಮೂಲಕ ಸರ್ಕಾರದ ಮನವಿ ಸಲ್ಲಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ  ಮಾಣಿಕ್ಯ ಚಿಲ್ಲೂರ ಅವರು, ರಾಜ್ಯದಲ್ಲಿ ತೀವ್ರ ಬರಗಾಲದಿಂದ ಅನ್ನದಾತರು ಕಣ್ಣೀರಿನಲ್ಲಿದ್ದಾರೆ. ಜಾನುವಾರುಗಳಿಗೆ ಕುಡಿಯಲು ನೀರು ಹಾಗೂ ಮೇವಿನ ತೀವ್ರ ಕೊರತೆ ಉಂಟಾಗಿದೆ. . ಕಬ್ಬು ಬೆಳೆಗೆ ಸೂಕ್ತ ಬೆಂಬಲ ಬೆಲೆ ಎಫ್‌ಆರ​‍್ಿ ನಿಗದಿಪಡಿಸಬೇಕು.ಎಂದರು.ರೈತ ಮುಖಂಡ ಸುರೇಶ ಸಂಪಗಾವಿ ಸೇರಿದಂತೆ ವಿವಿಧ ರೈತ ಸಂಘಟನೆಗಳ ಪ್ರಮುಖ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಕಬ್ಬು ಬೆಳೆಗಾರರು ಮತ್ತು ರೈತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.  

ಈ ವೇಳೆ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ರೈತರ ಕೃಷಿ ವೆಚ್ಚ ವಿಪರೀತವಾಗಿ ಹೆಚ್ಚಳವಾಗಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ತೋರುತ್ತಿವೆ ಎಂದು ಮುಖಂಡರು ಆರೋಪಿಸಿದರು. ಬೇಡಿಕೆಗಳು ಈಡೇರುವವರೆಗೆ ಹೋರಾಟವನ್ನು ಮುಂದುವರಿಸುವುದಾಗಿ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಲಾಯಿತು.ಈ ಸಂದರ್ಭದಲ್ಲಿ ಶಿವಾನಂದ ಸರದಾರ, ಅಲೀಸಾಬ ನೂಲಗಿ, ಬರಮಪ್ಪ ಅಣಿಗೇರಿ, ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು. 


ಸುದ್ದಿ ಓದಿ