ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ
Massive free health check-up camp
ವಿಜಯಪುರ 28: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ತಿಕೋಟಾ ತಾಲೂಕಿನ ಬರಟಗಿ ಗ್ರಾಮದ ಸರಕಾರಿ ಮಾದರಿ ಪ್ರೌಢಶಾಲೆಯಲ್ಲಿ ಶನಿವಾರ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ತಿಕೋಟಾ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಉಪಅಧೀಕ್ಷ ಡಾ. ರವಿಕುಮಾರ ಬಿರಾದಾರ ಉದ್ಘಾಟಿಸಿದರು.
ಈ ಶಿಬಿರದಲ್ಲಿ ಚಿಕ್ಕಮಕ್ಕಳ ಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಸ್ತ್ರೀರೋಗ ಮತ್ತು ಪ್ರಸೂತಿ, ಸಾಮಾನ್ಯ ವೈದ್ಯಕೀಯ, ದಂತ, ನೇತ್ರ, ಎಲುಬು ಮತ್ತು ಕೀಲು, ಚರ್ಮ ರೋಗ, ಕಿವಿ ಮೂಗು ಹಾಗೂ ಗಂಟಲು ಚಿಕಿತ್ಸೆ ವಿಭಾಗಗಳ ನುರಿತ ತಜ್ಞ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು. ಸುಮಾರು 320 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಅಲ್ಲದೇ, ಇವರಿಗೆ ಉಚಿತವಾಗಿ ಓಷಧಿ ವಿತರಿಸಲಾಯಿತು. ಸುಮಾರು 72 ಶಿಬಿರಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ಶಿಫಾರಸು ಮಾಡಲಾಯಿತು.
ಈ ಶಿಬಿರದಲ್ಲಿ ಗ್ರಾಮದ ಮುಖಂಡ ಬಸನಗೌಡ ಪಾಟೀಲ, ಡಾ. ರವೀಂದ್ರ ಕರಡಿ, ಡಾ. ಪಿ. ಜಿ. ಮಂಟೂರ, ಡಾ. ಲಕ್ಷ್ಮಿ ಸಂಗೊಳ್ಳಿ, ಡಾ. ರಾಘವೇಂದ್ರ ಇಜೇರಿ, ಡಾ. ಬಸವರಾಜ ಬಾಗೇವಾಡಿ, ವೈದ್ಯಕೀಯ ಸ್ನಾತಕ್ಕೋತ್ತರ ವಿಭಾಗದ ವಿದ್ಯಾರ್ಥಿಗಳು, ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 