ಕೊಪ್ಪಳ

ಕೊಪ್ಪಳದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ: ಸಿಇಸಿ ಜ್ಞಾನೇಶ್‌ಕುಮಾರ್ ರಾಜೀನಾಮೆಗೆ ಆಗ್ರಹ

ಕೊಪ್ಪಳದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ: ಸಿಇಸಿ ಜ್ಞಾನೇಶ್‌ಕುಮಾರ್ ರಾಜೀನಾಮೆಗೆ ಆಗ್ರಹ


ಕೊಪ್ಪಳ  07: ಕೇಂದ್ರ ಚುನಾವಣಾ ಆಯೋಗದ ಮತಗಳ್ಳತನ ನೀತಿಯನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮತಗಳ್ಳತನ ಸಾಕ್ಷಿ ಸಮೇತ ಸಾಬೀತಾಗಿದ್ದು, ಈ ವಿಷಯವಾಗಿ ಗ್ರಾಮ ಮಟ್ಟದಲ್ಲೂ ನಿರಂತರ ಹೋರಾಟ ನಡೆಸಿ ಜಾಗೃತಿ ಮೂಡಿಸಲಾಗುವುದು ಎಂದು ಮಲ್ಲಿಕಾರ್ಜುನ ನಾಗಪ್ಪ ಕರೆ ನೀಡಿದರು. 


ಸುದ್ದಿ ಓದಿ