ಯಲ್ಲಾಪುರದಲ್ಲಿ ಯುವ ಕಾಂಗ್ರೆಸ್ನ ಬೃಹತ್ ಪ್ರತಿಭಟನೆ
Massive protest by Youth Congress in Yellapur
ಕಾರವಾರ 24 : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲ್- ಡೀಸಲ್ ದರ ಏರಿಕೆಯನ್ನು ಖಂಡಿಸಿ ಯಲ್ಲಾಪುರ ತಾಲೂಕಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆ ಇಂದು ಯಶಸ್ವಿಯಾಗಿ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರಕ್ಕೊಳಗಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಹಗಲಿರುಳು ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರೂ, ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟ ವ್ಯವಸ್ಥೆಯಿಂದ ಅವರ ಕನಸುಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಡಾ. ರವಿ ಭಟ್ ಬರಗದ್ದೆ, ಪ್ರಚಾರ ಸಮಿತಿಯ ಅಧ್ಯಕ್ಷ ನರಸಿಂಹ ನಾಯ್ಕ, ತಾಲೂಕಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಉಲ್ಲಾಸ್ ಶಾನಭಾಗ, ತಾಲೂಕಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫೈರೋಜ್ ಶೇಖ್, ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಅಮೋಧ ಶಿರಸಿಕರ್, ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿಶ್ವಾಸ್ ನಾಯ್ಕ, ತಾಲೂಕಾಧ್ಯಕ್ಷ ಗಣೇಶ ಹೆಗಡೆ, ಉಪಾಧ್ಯಕ್ಷ ಮಹೇಶ್ ನಾಯ್ಕ, ಮಹಿಳಾ ಕಾಂಗ್ರೆಸ್ನ ಪೂಜಾ ನೇತ್ರೇಕರ, ಸರಸ್ವತಿ ಗುನಗಾ, ಮುಷರತ್ ಖಾನ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಯೂತ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ 