ಜಮೀರ್ ಅಹ್ಮದ್ ಖಾನ್ ಪರ ರೈತ ಸಂಘಟನೆ ಯಿಂದ ಬೃಹತ್ ಪ್ರತಿಭಟನೆ
Massive protest by farmers' organization in favor of Zameer Ahmed Khan
ಕೊಪ್ಪಳ 09 : ಪಕ್ಕದ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನ ಹೊಸಪೇಟೆ ನಗರದಲ್ಲಿ ಜಮೀರ್ ಅಹಮದ್ ಖಾನ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ಸಂಘಟನೆಗಳು ಮತ್ತು ಅವರ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದರು, ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಪುನೀತ್ ರಾಜಕುಮಾರ್ ವೃತ್ತದ ಹತ್ತಿರ ರಸ್ತೆ ತಡೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೂಡಲೆ ಸಂಪುಟ ರಚನೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ರವರಿಗೆ ಸೂಕ್ತ ಸ್ಥಾನಮಾನ ಉಪಮುಖ್ಯಮಂತ್ರಿ ಅಥವಾ ಸಚಿವ ಸ್ಥಾನ ನೀಡಲೇಬೇಕು ಎಂದು ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ವರಿಷ್ಠ ಮಂಡಳಿಗೆ ರೈತ ಸಂಘಟನೆ ಮತ್ತು ಅವರ ಬೆಂಬಲಿಗರು ಒತ್ತಾಯಿಸಿದರು, ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 