ಮಹಲಿಂಗಪುರ

ಮಹಾಲಿಂಗಪುರದಲ್ಲಿ ರೈತರ ಬೃಹತ್ ಪ್ರತಿಭಟನೆ: ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರಕ್ಕೆ ಎಚ್ಚರಿಕೆ

ಮಹಾಲಿಂಗಪುರದಲ್ಲಿ ರೈತರ ಬೃಹತ್ ಪ್ರತಿಭಟನೆ: ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರಕ್ಕೆ ಎಚ್ಚರಿಕೆ
Massive protest by farmers in Mahalingapura: Road blocked at Chennamma Circle as a warning to the go


ಮಹಾಲಿಂಗಪುರ   15: ಕಬ್ಬು ಬೆಳೆಗಾರರ ಬೆವರಿನ ದುಡಿಮೆಗೆ ನ್ಯಾಯಯುತ ಬೆಲೆ ಸಿಗಬೇಕು, ಕಟಾವು ಮಾಡಿದ ಕಬ್ಬಿನ ಬಾಕಿ ಹಣ ತಕ್ಷಣ ರೈತರ ಕೈ ಸೇರಬೇಕು ಹಾಗೂ ಮುಂಬರುವ ಕಬ್ಬು ನುರಿಸುವ ಹಂಗಾಮಿಗೆ ಪ್ರತಿ ಟನ್‌ಗೆ ?5,500 ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಾಗಲಕೋಟೆ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ನಗರದ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಿದರು. 

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು, ರೈತರ ಬೇಡಿಕೆಗಳನ್ನು ನಿರ್ಲಕ್ಷಿಸದೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯದಿದ್ದರೆ ಕೃಷಿ ಕ್ಷೇತ್ರ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ. ಕಬ್ಬು ಬೆಳೆಯಲು ಬೀಜ, ಗೊಬ್ಬರ, ಓಷಧ, ಕಾರ್ಮಿಕರ ಕೂಲಿ, ನೀರಾವರಿ ಹಾಗೂ ಸಾಗಣೆ ವೆಚ್ಚಗಳು ನಿರಂತರವಾಗಿ ಹೆಚ್ಚುತ್ತಿವೆ. ಆದರೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕಬ್ಬಿನ ಬೆಲೆ ನಿಗದಿಯಾಗದಿರುವುದು ಬೆಳೆಗಾರರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುತ್ತಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. 


ಸುದ್ದಿ ಓದಿ