ಸರ್ಕಾರಿ ಪದವಿ ಕಾಲೇಜು ಪ್ರಾರಂಭಿಸುವಂತೆ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ
Massive protest by students demanding the opening of a government degree college
ಲಕ್ಷ್ಮೇಶ್ವರ" 15 : ಪಟ್ಟಣದಲ್ಲಿ ಸರಕಾರಿ ಪದವಿ ಕಾಲೇಜು ಇಲ್ಲದಿರುವುದರಿಂದ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದುತಾಲೂಕು ಕೇಂದ್ರವಾಗಿರುವ ಲಕ್ಷ್ಮೇಶ್ವರದಲ್ಲಿ ಸರಕಾರಿ ಪದವಿ ಕಾಲೇಜು ಪ್ರಾರಂಭಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಈಗಾಗಲೇ ಸರಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನ ವಾಗದೆ ಇರುವುದರಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಲಕ್ಷ್ಮೇಶ್ವರ ಪಟ್ಟಣ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರುಪ್ರತಿಭಟನೆಯನ್ನು ಉದ್ದೇಶಿಸಿ ಭಾರತೀಯ ವಿದ್ಯಾರ್ಥಿ ಘಟಕದ ವಿದ್ಯಾರ್ಥಿ ಅಭಿಷೇಕ ಉಮಚಗಿ ಹಾಗೂ ವಿಚಿದ್ಯಾರ್ಥಿನಿಯರು ಮಾತನಾಡಿ ಲಕ್ಷ್ಮೇಶ್ವರ ತಾಲೂಕು ಕೇಂದ್ರವಾಗಿದ್ದರಿಂದ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿನಿಯರು ವಿದ್ಯಾರ್ಥಿಗಳು ಲಕ್ಷ್ಮೇಶ್ವರಕ್ಕೆ ಬರುತ್ತಾರೆ ಆದರೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರ್ಕಾರಿ ಪದವಿ ಕಾಲೇಜು ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ.
ಈ ವಿಷಯವಾಗಿ ಈಗಾಗಲೇ ಸರಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದರು ಸಹ ಸರ್ಕಾರದಿಂದ ಯಾವುದೇ ಪದವಿ ಕಾಲೇಜು ತೆರೆಯುವ ವಿಚಾರ ಮಾಡುತ್ತಿಲ್ಲ ಇದು ಹೀಗೆ ಮುಂದುವರೆದರೆ ಲಕ್ಷ್ಮೇಶ್ವರ ಬಂದ್ ಮಾಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಉಗ್ರ ಪ್ರತಿಭಟನೆಯ ಮೂಲಕ ಹೋರಾಟ ಮಾಡಬೇಕಾಗುತ್ತದೆ ಅದಕ್ಕೆ ಸರ್ಕಾರ ಆಸ್ಪಂದ ಕೊಡದೆ ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಪದವಿ ಕಾಲೇಜು ತೆರಿಯಲು ಬೇಗನೆ ಮುಂದಾಗಬೇಕುಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚು ಬಸ್ ಬಿಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆ ಕೈಗೊಳ್ಳಲಾಗಿತ್ತು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 