ವಿಜಯಪುರ

ಕಾರ್ಮಿಕರ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಡಿ.3 ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಕಾರ್ಮಿಕರ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಡಿ.3 ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ


             ರಾಯಚೂರು 27 : ಕನಿಷ್ಠ ವೇತನ ಜಾರಿಗೊಳಿಸಿ, ಗುತ್ತಿಗೆ ಕಾರ್ಮಿಕರ ಶೋಷಣೆ ತಡೆಯಲು ಆಗ್ರಹಿಸಿ ಡಿಸೆಂಬರ್ 3ರಂದು ಬೆಳಗಾವಿ ಚಲೋಎಐಸಿಸಿಟಿಯು ನೇತೃತ್ವದಲ್ಲಿ ಸುವರ್ಣಸೌಧದ ಮುಂದೆ ಬೃಹತ್ ಪ್ರತಿಭಟನೆ . ರಾಜ್ಯದ ಎಲ್ಲಾ ಕಾರ್ಮಿಕರಿಗೆ ನ್ಯಾಯಯುತ ಕನಿಷ್ಠ ವೇತನ ಜಾರಿಗೊಳಿಸಬೇಕು, ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರ ಶೋಷಣೆಯನ್ನು ತಡೆಯಬೇಕು,

             ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಉದ್ಯೋಗದ ಹಕ್ಕುಗಳನ್ನು ಖಾತರಿಪಡಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್‌ (ಎಐಸಿಸಿಟಿಯು) ನೇತೃತ್ವದಲ್ಲಿ ಡಿಸೆಂಬರ್ 3, 2026ರಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ

                 ಎಂದು ಎಐಸಿಸಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ತಿಳಿಸಿದರು. ಕಾರ್ಮಿಕ ವರ್ಗವು ದಶಕಗಳ ಕಾಲ ನಡೆಸಿದ ಹೋರಾಟಗಳ ಮೂಲಕ ಗಳಿಸಿಕೊಂಡಿರುವ ಉದ್ಯೋಗ ಭದ್ರತೆ, ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ ಹಾಗೂ ಸಂಘಟಿತ ಹೋರಾಟದ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. 

ಸುದ್ದಿ ಓದಿ