ಬೆಳಗಾವಿ

ಗಡಿ ಪ್ರದೇಶದ ನೀರಿನ ಸಮಸ್ಯೆ ಪರಿಹಾರಕ್ಕೆ ಜು.18ರಂದು ಬೃಹತ್ ಪ್ರತಿಭಟನೆ

ಗಡಿ ಪ್ರದೇಶದ ನೀರಿನ ಸಮಸ್ಯೆ ಪರಿಹಾರಕ್ಕೆ ಜು.18ರಂದು ಬೃಹತ್ ಪ್ರತಿಭಟನೆ

ಸಂಬರಗಿ 17: ಗಡಿ ಪ್ರದೇಶದಲ್ಲಿ ಬರದ ಪರಿಸ್ಥಿತಿ ತೀವ್ರಗೊಂಡಿದ್ದು, ನೀರಿನ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ರೈತರ ಹಿತದೃಷ್ಟಿಯಿಂದ ಬಸವೇಶ್ವರ ನೀರು ಸರಬರಾಜು ಯೋಜನೆಯ ಕಾಲುವೆಗೆ ಕೃಷ್ಣಾ ನದಿಯಿಂದ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿ ಜುಲೈ 18ರಂದು ಮಾಜಿ ಸಚಿವ ಶ್ರೀಮಂತ ಪಾಟೀಲ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.  

ಈ ಕುರಿತು ಬಿಜೆಪಿ ನಾಯಕ ಆರ್‌.ಎಂ. ಪಾಟೀಲ ಮಾಹಿತಿ ನೀಡಿದ್ದು, ಗಡಿ ಪ್ರದೇಶದಲ್ಲಿ ನೀರಿನ ಅಭಾವ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರ ಕೂಡಲೇ ಕ್ರಮ ಕೈಗೊಂಡು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು.  ಪ್ರತಿಭಟನೆಯಲ್ಲಿ ಗಡಿ ಭಾಗದ ವಿವಿಧ ಗ್ರಾಮಗಳಿಂದ ಸಾವಿರಾರು ರೈತರು ಹಾಗೂ ಸಾರ್ವಜನಿಕರು ಭಾಗವಹಿಸುವ ನೀರೀಕ್ಷೆಯಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.  


ಸುದ್ದಿ ಓದಿ