ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಆಗ್ರಹಿಸಿ ಮಾಸ್ತಿಹೊಳಿ ಗ್ರಾಮಸ್ಥರ ಅಹೋರಾತ್ರಿ ಧರಣಿ

ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಆಗ್ರಹಿಸಿ ಮಾಸ್ತಿಹೊಳಿ ಗ್ರಾಮಸ್ಥರ ಅಹೋರಾತ್ರಿ ಧರಣಿ Masthiholi villagers stage day-and-night protest demanding compensation for farmers who lost their l

ಬೆಳಗಾವಿ 14 : ಭೂಸ್ವಾಧೀನದಿಂದ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮಾಸ್ತಿಹೊಳಿ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಮಂಗಳವಾರ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭಿಸಿದರು.ಮಾಸ್ತಿಹೊಳಿ, ಗುಡಗನಟ್ಟಿ, ಬೀರನಹೊಳಿ, ಸುತಗಟ್ಟಿ ಹಾಗೂ ಜಾರಕಿಹೊಳಿ ಗ್ರಾಮಗಳ 500ಕ್ಕೂ ಹೆಚ್ಚು ರೈತರು ನೀರಾವರಿ ಕಚೇರಿ ಎದುರು ಜಮಾಯಿಸಿ, ಕೈಯಲ್ಲಿ ಫಲಕಗಳನ್ನು ಹಿಡಿದು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು..

ಹಲವು ವರ್ಷಗಳ ಹಿಂದೆ ನೀರಾವರಿ ಯೋಜನೆಗಾಗಿ ತಮ್ಮ ಜಮೀನುಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದ್ದರೂ ಇದುವರೆಗೆ ಪೂರ್ಣ ಪ್ರಮಾಣದ ಪರಿಹಾರ ದೊರೆತಿಲ್ಲ. ಈ ಕುರಿತು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಶಾಶ್ವತ ಪರಿಹಾರ ದೊರೆಯಲಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.ರೈತ ಮುಖಂಡ ಬಾಳೇಶ ಮಾವನೂರೆ ಮಾತನಾಡಿ, ಹಿಡಕಲ್ ಜಲಾಶಯದ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಮಾಸ್ತಿಹೊಳಿ ಗ್ರಾಮದ ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ತಪ್ಪು ಮಾಹಿತಿ ಸಲ್ಲಿಸಲಾಗಿದೆ ಎಂದು ಆರೋಪಿಸಿದರು."ಈ ಕುರಿತು ಸಮರ​‍್ಕ ಮಾಹಿತಿ ನೀಡುವಂತೆ ಸೆಕ್ರೆಟರಿ ಕಚೇರಿಯಿಂದ ಮೇ 8ರಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿಗೆ ಪತ್ರ ಕಳುಹಿಸಲಾಗಿತ್ತು. ಆದರೆ ಕಳೆದ ಎರಡು ತಿಂಗಳಿಂದ ರೈತರು ಕಚೇರಿಗೆ ಅಲೆದಾಡುತ್ತಿದ್ದರೂ, ’ಫೈಲ್ ಬಂದಿಲ್ಲ’ ಎಂಬ ಹಾರಿಕೆ ಉತ್ತರಗಳನ್ನು ಅಧಿಕಾರಿಗಳು ನೀಡುತ್ತಿದ್ದಾರೆ" ಎಂದು ಅವರು ದೂರಿದರು.