ಗದಗ

ದೇಶಕ್ಕೆ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಕೊಡುಗೆ ಅಪಾರವಾಗಿದೆ : ಆರ್‌. ಎನ್‌. ನದಾಫ್‌

ದೇಶಕ್ಕೆ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಕೊಡುಗೆ ಅಪಾರವಾಗಿದೆ : ಆರ್‌. ಎನ್‌. ನದಾಫ್‌

         ಗದಗ  11 : ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಭಾರತದ ಸ್ವಾತಂತ್ರ-್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ ಮಹಾನ್ ನಾಯಕರು, ವಿದ್ವಾಂಸರು, ಪತ್ರಕರ್ತರು ಹಾಗೂ ಶಿಕ್ಷಣ ತಜ್ಞರಾಗಿದ್ದರು. ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ದೇಶದ ಶಿಕ್ಷಣ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದವರು ಎಂದು ದಿ. ಆಝಾದ ಕೋಪರೇಟಿವ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ಆರ್‌.ಎನ್‌. ನದಾಫ್ ಅವರು ಹೇಳಿದರು.  

              ನಗರದ ಗಂಗಾಪೂರ ಪೇಟೆಯಲ್ಲಿರುವ ಶ್ರೀ ದುರ್ಗಾದೇವಿ ಶಿಕ್ಷಣ ಸಮಿತಿಯಲ್ಲಿ ದಿ. ಆಝಾದ ಕೋಅಪರೇಟಿವ್ ಬ್ಯಾಂಕ್‌ನ ಸಹಯೋಗದಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಕ್ಕಳಿಗೆ ಸಿಹಿ ವಿತರಿಸಿ ಮಾತನಾಡಿ,                ಅಬುಲ್ ಕಲಾಂ ಗುಲಾಮ್ ಮುಹಿಯುದ್ದೀನ್ ಅವರು 1888 ರಂದು ನವಂಬರ  11 ರಂದು ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಜನಿಸಿದರು.  ಅವರು ಅರೇಬಿಕ್, ಉರ್ದು, ಪರ್ಷಿಯನ್, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಪರಿಣತಿ ಹೊಂದಿದ್ದರು.  ಬ್ರಿಟಿಷರ ಆಡಳಿತದ ವಿರುದ್ಧ ಸ್ವಾತಂತ್ರ-್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.ಮಹಾತ್ಮ ಗಾಂಧೀಜಿಯವರ ಅಸಹಕಾರ ಚಳವಳಿಗೆ ಬೆಂಬಲ ನೀಡಿದರು. 

                 ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ಹಿಂದೂ ಮತ್ತು ಮುಸ್ಲಿಮರ ನಡುವೆ ಏಕತೆ ಹಾಗೂ ಸೌಹಾರ್ದತೆಯನ್ನು ಪ್ರತಿಪಾದಿಸಿದರು. ಬ್ರಿಟಿಷರ ವಿರುದ್ಧ ತಮ್ಮ ಪತ್ರಿಕೋದ್ಯಮದ ಮೂಲಕ ಜನಜಾಗೃತಿ ಮೂಡಿಸಿದರು ಎಂದು ಹೇಳಿದರು.  


ಸುದ್ದಿ ಓದಿ