ಧ್ಯಾನಚಂದರ ಕ್ರೀಡಾ ಪ್ರೇಮ, ದೇಶಪ್ರೇಮ ಮಕ್ಕಳಿಗೆ ಸ್ಪೂರ್ತಿಯಾಗಲಿ
ಕಾಕತಿ 29: ಮೇಜರ್ ಧ್ಯಾನಚಂದರ ಕ್ರೀಡಾ ಜೀವನ ಇಂದಿನ ಮಕ್ಕಳಿಗೆ ಮಾದರಿಯಾಗಬೇಕು ಎಂದು ಮುಖ್ಯ ಶಿಕ್ಷಕ ಅಶೋಕ ಖೋತ ಹೇಳಿದರು. ಕಾಕತಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪದಕ ಪಡೆದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.