ವಿಜಯಪುರ

ಒನಕೆ ಓಬವ್ವ ಅವರ ಧೈರ್ಯ, ಸಾಹಸ ಮತ್ತು ತ್ಯಾಗ ಇಂದಿನ ಮಹಿಳೆಯರಿಗೆ ಸ್ಫೂರ್ತಿಯಾಗಲಿ: ಡಾ. ಓದ್ರಾಮ

ಒನಕೆ ಓಬವ್ವ ಅವರ ಧೈರ್ಯ, ಸಾಹಸ ಮತ್ತು ತ್ಯಾಗ ಇಂದಿನ ಮಹಿಳೆಯರಿಗೆ ಸ್ಫೂರ್ತಿಯಾಗಲಿ: ಡಾ. ಓದ್ರಾಮ
May the courage, bravery, and sacrifice of Onake Obavva serve as an inspiration for the women of to

ಲೋಕದರ್ಶನ ವರದಿ 

          ವಿಜಯಪುರ 11:  ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ  ಧೈರ್ಯ, ಸಾಹಸ, ಸ್ವಾಭಿಮಾನ ಹಾಗೂ ದೇಶಪ್ರೇಮಕ್ಕೆ ವಿಶಿಷ್ಟ ಸ್ಥಾನವಿದೆ. ಅಸಾಧಾರಣ ಸಮಯಪ್ರಜ್ಞೆ ಮತ್ತು ಸಾಹಸದಿಂದ ಚಿತ್ರದುರ್ಗದ ಕೋಟೆಯನ್ನು ರಕ್ಷಿಸಲು ಹೋರಾಡಿದ ಓಬವ್ವ ಅವರ ಜೀವನ ಎಲ್ಲರಿಗೂ ಪ್ರೇರಣಾದಾಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಹೇಳಿದರು. 

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

          ಕನ್ನಡ ನಾಡಿನ ಇತಿಹಾಸದಲ್ಲಿ ಮಹಿಳಾ ಶೌರ್ಯ ಮತ್ತು ಸ್ವಾಭಿಮಾನದ ಪ್ರತೀಕವಾಗಿ ಒನಕೆ ಓಬವ್ವ ಅಜರಾಮರವಾಗಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ಸಮಯಪ್ರಜ್ಞೆ, ಧೈರ್ಯ ಮತ್ತು ಅಪಾರ ಸಾಹಸ ಪ್ರದರ್ಶಿಸಿ ಕೋಟೆಯ ರಕ್ಷಣೆಗೆ ನಿಂತ ಅವರ ವೀರೋಚಿತ ಕಾರ್ಯ ಇಂದಿಗೂ ಸ್ಮರಣೀಯವಾಗಿದೆ ಎಂದರು. 

ಪತಿ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಅವರಿಗೆ ತೊಂದರೆಯಾಗಬಾರದೆಂಬ ಕಾಳಜಿಯಿಂದ, ಕೋಟೆಯ ರಕ್ಷಣೆಯ ಹೊಣೆ ತಾವೇ ವಹಿಸಿಕೊಂಡು ಶತ್ರು ಸೈನಿಕರನ್ನು ಎದುರಿಸಿದ ಓಬವ್ವ ಅವರ ಕಾರ್ಯ ಅವರ ಕರ್ತವ್ಯನಿಷ್ಠೆ ಮತ್ತು ಅಸಾಧಾರಣ ಧೈರ್ಯಕ್ಕೆ ಸಾಕ್ಷಿಯಾಗಿದೆ. ನಾಡಿನ ರಕ್ಷಣೆಗೆ ಆದ್ಯತೆ ನೀಡಿದ ಅವರ ಶೌರ್ಯ, ತ್ಯಾಗ ಮತ್ತು ದೇಶಪ್ರೇಮ ಇಂದಿನ ಯುವಜನತೆಗೆ, ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿಯಾಗಬೇಕು ಎಂದರು. 


ಸುದ್ದಿ ಓದಿ