ಬಳ್ಳಾರಿ

ಮಹನೀಯರ ಆದರ್ಶ ನಮಗೆಲ್ಲ ಸ್ಫೂರ್ತಿಯಾಗಲಿ: ನಾರಾ ಭರತ್ ರೆಡ್ಡಿ

ಮಹನೀಯರ ಆದರ್ಶ ನಮಗೆಲ್ಲ ಸ್ಫೂರ್ತಿಯಾಗಲಿ: ನಾರಾ ಭರತ್ ರೆಡ್ಡಿ

ಬಳ್ಳಾರಿ,ನ.30: ಭಕ್ತ ಕನಕದಾಸರ ತಾತ್ವಿಕತೆಯ ಚಿಂತನೆ, ಸಂಗೊಳ್ಳಿ ರಾಯಣ್ಣನ ಧೈರ್ಯ ಹಾಗೂ ಇದೇ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯರ ಚಾಣಕ್ಯತನ ಮಾದರಿಯಾಗಿದ್ದು, ಮಹನೀಯರ ಆದರ್ಶ ನಮಗೆಲ್ಲ ಸ್ಫೂರ್ತಿಯಾಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ರಾಘವ ಕಲಾ ಮಂದಿರದಲ್ಲಿ ಏರಿ​‍್ಡಸಿದ್ದ ಸಂತ ಶ್ರೇಷ್ಠ ಕವಿ ಭಕ್ತ ಕನಕದಾಸ 536ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

ಕನಕದಾಸರ ಆಧ್ಯಾತ್ಮಕ ವಿಷಯಗಳಿಂದ ಸಮಾಜದ ತಲ್ಲಣಕ್ಕೆ ಕಾರಣವಾಯಿತು. ಅದೇ ರೀತಿಯಾಗಿ ಸಂಗೋಳ್ಳಿ ರಾಯಣ್ಣನಂತಹ ಪರಾಕ್ರಮಿಯು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ಯುದ್ಧಗಳನ್ನು ಎದುರಿಸಿದನು. ನಮ್ಮ ನಾಡಿನ ಮುಖ್ಯಮಂತ್ರಿಯವರು ಅದೇ ಸಮುದಾಯದವರಾಗಿದ್ದು, ನಾಡಿನ ಅಭಿವೃದ್ಧಿಗೆ ಒತ್ತು ನೀಡಿ, ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಈ ಸಮುದಾಯದವರು, ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಹೇಳಿದರು.  

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಕನಕದಾಸರು ಹಲವಾರು ವಚನ ಸಾಹಿತ್ಯಗಳನ್ನು ರಚಿಸಿದ್ದಾರೆ. ಕನಕದಾಸರು ಸಮಾಜದ ಒಳಿತಿಗಾಗಿ ಶ್ರಮಿಸಿದವರಾಗಿದ್ದು, ಅವರ ಜೀವನ ಮೌಲ್ಯಗಳನ್ನು, ಸಿದ್ದಾಂತಗಳನ್ನು ಅಳವಡಿಸಿಕೊಂಡರೆ ಪ್ರತಿಯೊಬ್ಬರ ಜೀವನ ಸುಗಮವಾಗುತ್ತದೆ ಎಂದು ತಿಳಿಸಿದರು.  

ಕನ್ನಡ ಪ್ರಾಧ್ಯಾಪಕ ಬಿ.ಎರ್ರಿಸ್ವಾಮಿ ಅವರು ಕನಕದಾಸ ಜಯಂತಿಯ ವಿಶೇಷ ಉಪನ್ಯಾಸ ನೀಡಿ, ಕುಲ-ಕುಲ ಎಂದು ಹೊಡೆದಾಡದಿರಿ, ದೇಹ, ಆತ್ಮ, ಗಾಳಿ, ನೀರು, ಬೆಳಕು ಇವುಗಳಿಗೆ ಯಾವ ಕುಲವಿದೆ ಎಂದು ತಿಳಿಸಿಕೊಟ್ಟ ಮಹಾನ್ ಸಂತರು. 15 ಮತ್ತು 16ನೇ ಶತಮಾನದ ಜನಪ್ರಿಯ ಭಕ್ತಿಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ಒಬ್ಬರು. ದಾಸ ಸಾಹಿತ್ಯದಲ್ಲಿ ಜೀವನ ಪಾಠವನ್ನು ಕಂಡುಕೊಂಡವರು. ಕನಕದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದಲ್ಲಿ ಆಶ್ವಿನಿ ದೇವತೆಗಳಿಗೆ ಹೋಲಿಸಲಾಗುತ್ತದೆ ಎಂದು ಕನಕದಾಸರ ಜೀವನ ಚರಿತ್ರೆ, ಕೀರ್ತನೆಗಳು, ಮಂಡನೆಗಳು ಕುರಿತು ಉಪನ್ಯಾಸ ನೀಡಿದರು.  

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪಮೇಯರ್ ಬಿ.ಜಾನಕಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಪಾಲಿಕೆ ಸದಸ್ಯೆ ಈರಮ್ಮ ಸುರೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರ​‍್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಗಾದಿಲಿಂಗನಗೌಡ ಸೇರಿದಂತೆ ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು ಹಾಗೂ ಮತ್ತಿತರು ಉಪಸ್ಥಿತರಿದ್ದರು.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಸಂತ ಶ್ರೇಷ್ಠ ಕವಿ ಭಕ್ತ ಕನಕದಾಸ ಜಯಂತ್ಯೋತ್ಸವದ ಮೆರವಣಿಗೆಯು ಅದ್ದೂರಿಯಾಗಿ, ಸಂಭ್ರಮದಿಂದ ನಡೆಯಿತು. ನಗರದ ಅಗ್ನಿಶಾಮಕ ದಳ ಕಚೇರಿ ಹತ್ತಿರ ಕನಕದಾಸ ವೃತ್ತದ ಭಕ್ತ ಕನಕದಾಸ ಅವರ ಪುತ್ಥಳಿಗೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಾಲಾರೆ​‍್ಣ ಹಾಗೂ ಪುಷ್ಪಾರ್ಚನೆ ಮಾಡಿದರು. ಡಮರುಗ, ಡೊಳ್ಳು ಬಾರಿಸಿ ಸಂಭ್ರಮಿಸುವ ಮೂಲಕ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು.  

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಉಪ ಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಕುರುಬ ಸಮಾಜದ ಮುಖಂಡರುಗಳು ಇದ್ದರು.  

ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ಕಹಳೆ ವಾದನ, ಗೊರವರ ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಗಮನಸೆಳೆದವು.  

ಜಯಂತಿಯ ಮೆರವಣಿಗೆಯು ಕನಕದಾಸ ವೃತ್ತದಿಂದ ಆರಂಭವಾಗಿ ಎಸ್ಪಿ ಸರ್ಕಲ್ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ರಾಘವ ಕಲಾ ಮಂದಿರದ ವೇದಿಕೆ ಸಭಾಂಗಣದವರೆಗೆ ತಲುಪಿತು.  



ಸುದ್ದಿ ಓದಿ