ಬಸವಾದಿ ಶರಣರ ಬದುಕು ಮಾದರಿಯಾಗಲಿ: ಶಿವಲೀಲಾ ಮುರಾಳ
May the lives of Basava and other Sharanas serve as a model: Shivalila Murala
ತಾಳಿಕೋಟಿ 25 : ಬಸವಾದಿ ಶರಣರು ತಮ್ಮ ಅಮೂಲ್ಯ ವಚನಗಳ ಮೂಲಕ 12ನೇ ಶತಮಾನದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಕ್ರಾಂತಿ ತಂದರು. ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಕವಾಗಿದ್ದು, ಅವು ಬದುಕಿನ ಉದ್ದೇಶವನ್ನು ತಿಳಿಸಿಕೊಡುತ್ತವೆ ಎಂದು ಶಿಕ್ಷಕಿ ಹಾಗೂ ಸಾಹಿತಿ ಶಿವಲೀಲಾ ಮಹಾಂತೇಶ ಮುರಾಳ ಹೇಳಿದರು. ಪಟ್ಟಣದ ಕಾಳಿಕಾದೇವಿ ದೇವಸ್ಥಾನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕ, ಯುವ ಘಟಕ ಹಾಗೂ ಕದಳಿ ವೇದಿಕೆ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಆಯೋಜಿಸಿದ್ದ ‘ವಚನ ಶ್ರಾವಣ’ ಎರಡನೇ ವಾರದ ಕಾರ್ಯಕ್ರಮದಲ್ಲಿ ‘ವಚನಗಳಲ್ಲಿ ಬದುಕಿನ ಮೌಲ್ಯಗಳು’ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು. ಬಸವಾದಿ ಶರಣರು ಕಾಯಕ, ದಾಸೋಹ, ಲಿಂಗಪೂಜೆ, ಅರಿವು, ಭಕ್ತಿ ಹಾಗೂ ಶ್ರದ್ಧೆಯಂತಹ ಮೌಲ್ಯಗಳನ್ನು ತಿಳಿಸಿಕೊಟ್ಟಿದ್ದು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮೊಬೈಲ್ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ಸಮಸ್ಯೆಗಳು ಉಂಟಾಗುತ್ತಿದ್ದು, ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 