ನಿವೃತ್ತ ನೌಕರರ ಜೀವನ ಸುಖಕರವಾಗಿರಲಿ
May the lives of retired employees be happy
ತಾಳಿಕೋಟಿ 01 : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಇಲಾಖೆಯಲ್ಲಿ ಸುಮಾರು 44 ವರ್ಷಗಳ ಕಾಲ ದಿನಗೂಲಿ ನೌಕರರಾಗಿ ತಮ್ಮ ಸೇವೆಯನ್ನು ಪ್ರಾಮಾಣಿಕತೆ ಯೊಂದಿಗೆ ಸಲ್ಲಿಸಿ ಇಂದು ನಿವೃತ್ತಿ ಹೊಂದಿರುವ ಬೆರಳಚ್ಚುಗಾರ ರವಿ ರಾಠೋಡ ಅವರ ವಿಶ್ರಾಂತ ಬದುಕು ನೆಮ್ಮದಿಯಿಂದ ಕೂಡಿರಲೆಂದು ಹಾರಿಸುತ್ತೇನೆ ಎಂದು ಕಾರ್ಯದರ್ಶಿ ಆರ್ ಎಸ್ ರಾಥೋಡ ಹೇಳಿದರು. ಸೋಮವಾರ ಪಟ್ಟಣದ ಎಪಿಎಂಸಿ ಕಾರ್ಯಾಲಯದ ಸಭಾಂಗಣದಲ್ಲಿ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸಿ ವಯೋನಿವೃತ್ತರಾದ ರವಿ ರಾಠೋಡ ಇವರಿಗೆ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು. ರವಿ ರಾಠೋಡ್ ಅವರ ಪ್ರಾಮಾಣಿಕ ಸೇವೆ ಸದಾ ಸ್ಮರಣೀಯವಾಗಿರುತ್ತದೆ ದಿನಗೂಲಿ ನೌಕರನಾಗಿ ಇಲಾಖೆಗೆ ಸೇರಿ ತಮ್ಮ ಕರ್ತವ್ಯವನ್ನು ಅತ್ಯಂತ ನಿಷ್ಠೆ ಹಾಗೂ ದಕ್ಷತೆಯಿಂದ ನಿರ್ವಸಿದ್ದಾರೆ ನಾನು ಅವರಿಗೆ ಸಿಬ್ಬಂದಿ ವರ್ಗದ ಪರವಾಗಿ ಅಭಿನಂದಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಯದರ್ಶಿ ಮೌನೇಶ, ಅಡತ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ ಶೆಟ್ಟಿ, ಮಾಜಿ ಅಧ್ಯಕ್ಷ ಮಲ್ಲನಗೌಡ ಯಾದಗಿರಿ, ಗಣ್ಯರಾದ ಸಿ ಎಸ್ ಯಾಳಗಿ, ಎಂ.ಬಿ. ಕುಂಬಾರ, ಏ.ಐ.ಜಾಲವಾದಿ, ಪ್ರಭು ಬಿಳೆಭಾವಿ,ಡಿ.ಕೆ.ಪಾಟೀಲ, ಎಸ್.ಡಿ.ಬಿದರಗುಂದಿ,ಎಸ್.ಸಿ.ಇಜೇರಿ, ಅಶೋಕ್ ಚಿನಗುಡಿ, ಸಲೀಂ ಕಲಾಸಿ, ಗುಂಡಣ್ಣ ಹಂದಿಗನೂರ,ಡಿಸಲೆ, ಮಾರುಕಟ್ಟೆ ಸಹಾಯಕ ಎಸ್.ಆರ್.ಮಠ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 