ಬೆಳಗಾವಿ

ಮೌಲಾನಾ ಆಜಾದ್ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಅರ್ಥಪೂರ್ಣ ಆಚರಣೆ

ಮೌಲಾನಾ ಆಜಾದ್ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಅರ್ಥಪೂರ್ಣ ಆಚರಣೆ


           ಸವದತ್ತಿ 11 : ರಾಮಾಪೂರ ಸೈಟ್ನ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಸಚಿವ, ಶ್ರೇಷ್ಠ ಶಿಕ್ಷಣ ತಜ್ಞ ಡಾ. ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.

           ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಕರು ಡಾ. ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ​‍್ಿಸಿದರು.ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯ ಎಸ್‌.ಎಸ್‌.ಹುಡೇದಮನಿ, ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದರಲ್ಲದೆ,                  ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಶ್ರಮಿಸಿದ ಮಹಾನ್ ನಾಯಕರಾಗಿದ್ದರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಪ್ರಥಮ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡು, ದೇಶದ ಶಿಕ್ಷಣ ಕ್ಷೇತ್ರಕ್ಕೆ ಭದ್ರ ಬುನಾದಿ ಹಾಕಿದರು. ಐಐಟಿ, ಯುಜಿಸಿ ಹಾಗೂ ಸಾಹಿತ್ಯ ಮತ್ತು ಸಂಗೀತ ನಾಟಕ ಅಕಾಡೆಮಿಗಳಂತಹ ಪ್ರತಿಷ್ಠಿತ ಸಂಸ್ಥೆಗಳ ಸ್ಥಾಪನೆಯಲ್ಲಿ ಅವರ ಪಾತ್ರ ಅಪಾರವಾಗಿದೆ.

            ದೇಶ ನಿರ್ಮಾಣದಲ್ಲಿ ಶಿಕ್ಷಣವೇ ಅತ್ಯಂತ ಪ್ರಮುಖ ಅಸ್ತ್ರ ಎಂದು ಪ್ರತಿಪಾದಿಸಿದ ಅವರ ತತ್ತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಸ್ಮರಿಸಿದರು. ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಮೌಲಾನಾ ಆಜಾದ್ ಅವರ ಜೀವನ ಚರಿತ್ರೆ ಆಧಾರಿತ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಏರಿ​‍್ಡಸಲಾಗಿತ್ತು.

             ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು. ಈ ವೇಳೆ ಬಿ.ಆರ್‌.ಸನದಿ, ಎಸ್‌.ಆರ್‌.ಮಕಾನದಾರ, ಎಸ್‌.ಆರ್‌.ಮನಗುಡಲಿ, ಆರ್‌.ಜೆ.ಅಲ್ಲಾರಕಿ, ಎಸ್‌.ಕೆ.ಲಮ್ಮಾಣಿ, ಟಿ.ಎಚ್‌.ಹನಸಿ, ಎಂ.ಎಂ.ಬೆಟಗೇರಿ ಹಾಗೂ ಶಾಲೆಯ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಮತ್ತು ಮತ್ತು ವಿದ್ಯಾರ್ಥಿಗಳು ಇದ್ದರು. 


ಸುದ್ದಿ ಓದಿ