ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರೊಂದಿಗೆ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ
Meaningful birthday celebration with senior citizens at an old age home
ಲಕ್ಷ್ಮೇಶ್ವರ, ಸೆ. 4: ಇಂದಿನ ಆಧುನಿಕ ಜೀವನಶೈಲಿಯಲ್ಲಿ ವಿವಿಧ ಕಾರಣಗಳಿಂದ ತಂದೆ-ತಾಯಿ ಹಾಗೂ ಕುಟುಂಬದ ಹಿರಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪರಿಸ್ಥಿತಿ ಕಂಡುಬರುತ್ತಿದೆ. ಇಂತಹ ಸಂದರ್ಭದಲ್ಲಿ ವೈಯಕ್ತಿಕ ಸಂತೋಷದ ಸಂದರ್ಭಗಳನ್ನು ಹಿರಿಯರೊಂದಿಗೆ ಹಂಚಿಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಕಾರ್ಯ ಶ್ಲಾಘನೀಯವಾಗಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಶಾಂತಿಧಾಮ ವೃದ್ಧಾಶ್ರಮದಲ್ಲಿ ವಕೀಲ ಮೈಲಾರ್ಪ ಡಿ.ಎಚ್. ಅವರು ತಮ್ಮ ಅಣ್ಣನ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಭೋಜನಕೂಟ ಆಯೋಜಿಸಿ, ಆಶ್ರಮದಲ್ಲಿರುವ ಹಿರಿಯ ನಾಗರಿಕರಿಗೆ ಆತ್ಮೀಯವಾಗಿ ಊಟ ಬಡಿಸಿ, ಹಣ್ಣು-ಹಂಪಲುಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿದರು.
ಗದಗ ಜಿಲ್ಲಾ ನ್ಯಾಯವಾದಿಗಳ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕದ ಜಿಲ್ಲಾಧ್ಯಕ್ಷರಾಗಿರುವ ಮೈಲಾರ್ಪ ಡಿ.ಎಚ್. ಅವರ ಈ ಕಾರ್ಯಕ್ಕೆ ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳು ಕೈಜೋಡಿಸಿದರು. ವೈಯಕ್ತಿಕ ಸಂಭ್ರಮವನ್ನು ಸಮಾಜದ ಹಿರಿಯರೊಂದಿಗೆ ಹಂಚಿಕೊಂಡು ಸಾಮಾಜಿಕ ಸೇವೆಯ ಸಂದೇಶ ಸಾರಿದ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.
ಶಾಂತಿಧಾಮ ವೃದ್ಧಾಶ್ರಮದಲ್ಲಿರುವ ಹಿರಿಯ ನಾಗರಿಕರೊಂದಿಗೆ ಸಮಯ ಕಳೆಯುವುದು, ಅವರಿಗೆ ಆತ್ಮೀಯವಾಗಿ ಭೋಜನ ಬಡಿಸುವುದು ಹಾಗೂ ಹಣ್ಣು-ಹಂಪಲು ವಿತರಿಸುವ ಮೂಲಕ ಮಾನವೀಯ ಮೌಲ್ಯಗಳನ್ನು ಮೆರೆದರು. ಹುಟ್ಟುಹಬ್ಬದ ವೈಯಕ್ತಿಕ ಸಂಭ್ರಮವನ್ನು ಸಮಾಜದ ಹಿರಿಯರೊಂದಿಗೆ ಹಂಚಿಕೊಳ್ಳುವ ಮೂಲಕ ಸಮಾಜಮುಖಿ ಸೇವೆಯ ಸಂದೇಶವನ್ನು ಸಾರಿದರು.
ಈ ಸಂದರ್ಭದಲ್ಲಿ ವೃದ್ಧಾಶ್ರಮದ ಹಿರಿಯ ಜೀವಿಗಳು ಮೈಲಾರ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿ ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಿವು ದೊಡ್ಡಮನಿ, ಪ್ರಶಾಂತ್ ಗುರುಮಠ, ಅಣ್ಣಪ್ಪ ಬಣಕಾರ, ಸಂಜೀವ ಮಂಟಗಣಿ, ದುರಗಪ್ಪ ದೊಡ್ಡಮನಿ, ನಾಗರಾಜ ಚೀನಾಗಿ, ಆದರ್ಶ ನೀಲಜ, ಮಹಾಂತೇಶ ನಾಗರಾಜ ಸೇರಿದಂತೆ ಅಭಿಮಾನಿಗಳು, ಕುಟುಂಬದ ಸದಸ್ಯರು, ವೃದ್ಧಾಶ್ರಮದ ಸಿಬ್ಬಂದಿ ಹಾಗೂ ಹಿರಿಯ ನಾಗರಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 