ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆ

ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆ  Meaningful celebration of Devaraj Urs Jayanti

ಲೋಕದರ್ಶನ ವರದಿ 

ಕಂಪ್ಲಿ 20: ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿಯಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.  

ವಿದ್ಯಾರ್ಥಿ ನಿಲಯದ ಪಾಲಕ ಜಿ. ಗಾದಿಲಿಂಗಪ್ಪ ಮಾತನಾಡಿ, ಶೋಷಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ನಾಯಕ ಡಿ. ದೇವರಾಜ ಅರಸು ಎಂದು ಹೇಳಿದರು.

ಸಮಾನತೆ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದ ಅವರು, ದೇವರಾಜ ಅರಸು ವಸತಿ ನಿಲಯಗಳನ್ನು ಸ್ಥಾಪಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.  

ದೇವರಾಜ ಅರಸು ಅವರ ಆದರ್ಶ ತತ್ವಗಳನ್ನು ಪಾಲಿಸುವುದರೊಂದಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಅವರು ಹೇಳಿದರು.  ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಾದ ಯುವರಾಜ, ಎಸ್‌. ಶೋಭಾ, ರಾಮಲಕ್ಷ್ಮೀ, ಶೋಭಾ ಸೇರಿದಂತೆ ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.