ಕಾರ್ಮಿಕರ ಸಂಘದಿಂದ ಅರ್ಥಪೂರ್ಣ ಧ್ವಜಾರೋಹಣ

ಕಾರ್ಮಿಕರ ಸಂಘದಿಂದ ಅರ್ಥಪೂರ್ಣ ಧ್ವಜಾರೋಹಣ  Meaningful flag-hoisting by the workers' union


ಸವದತ್ತಿ 16 : ಸವದತ್ತಿ ತಾಲೂಕು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಚೇರಿ ಎದುರು 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಂಘದ ವತಿಯಿಂದ ಅರ್ಥಪೂರ್ಣವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಘದ ಅಧ್ಯಕ್ಷ ಹುಸೇನಸಾಬ ಸನದಿ ಅಧ್ಯಕ್ಷತೆ ವಹಿಸಿದ್ದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅಶಪಾಕ ಧೂಪದಾಳ, ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಸಮಾಜದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಬಿಸಿಲು-ಮಳೆಯನ್ನೂ ಲೆಕ್ಕಿಸದೆ ಮನೆ, ಕಟ್ಟಡ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಕಾರ್ಮಿಕರ ಸೇವೆಯನ್ನು ಸಮಾಜ ಗೌರವಿಸಬೇಕು ಎಂದರು. ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಕುರಿತು ಅರ್ಹರಿಗೆ ಮಾಹಿತಿ ನೀಡಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಸೌಲಭ್ಯ ದೊರಕಿಸಿಕೊಡಲು ಸಂಘದ ಪದಾಧಿಕಾರಿಗಳು ನಿರಂತರವಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣವೇ ಕುಟುಂಬ ಮತ್ತು ಸಮಾಜದ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದೆ ಎಂದು ಹೇಳಿದರು. ಅಧ್ಯಕ್ಷ ಹುಸೇನಸಾಬ ಸನದಿ ಮಾತನಾಡಿ, ಕಾರ್ಮಿಕರ ಹಿತಾಸಕ್ತಿ ಕಾಪಾಡಲು ಸಂಘ ಸದಾ ಮುಂಚೂಣಿಯಲ್ಲಿರಲಿದೆ. ಕಾರ್ಮಿಕರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರು ಒಗ್ಗಟ್ಟಿನಿಂದ ಸಂಘಟಿತರಾಗಿ ತಮ್ಮ ಹಕ್ಕುಗಳಿಗಾಗಿ ಶ್ರಮಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಬಸವರಾಜ ಹಾಸಟ್ಟಿ, ಕುತುಬುದ್ದೀನ ಇಂಚಲ, ಪ್ರಕಾಶ ಪಟ್ಟಣ, ಬಾವಾಸಾಬ ಗಡದ, ದಾವೂದ ಉಸ್ತಾದ, ಮೌಲಾಸಾಬ ಗಿಡದನವರ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.