ವಿಜಯಪುರ

ಕಾಡುಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಕಾಡುಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಬೀದರ್, ಆ. 26: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಕಾಡುಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವುದರ ಜೊತೆಗೆ, ಕಾಡುಪ್ರಾಣಿಗಳಿಂದ ಬೆಳೆ ಹಾಗೂ ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ನೀಡಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದ್ದಾರೆ.  ಬೀದರ್ ಜಿಲ್ಲೆಗೆ ಆಗಮಿಸಿದ್ದ ಅರಣ್ಯ ಸಚಿವರನ್ನು ಭೇಟಿ ಮಾಡಿದ ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಕ್ಷೇತ್ರದ ಸಮಸ್ಯೆಗಳ ಕುರಿತು ವಿವರವಾಗಿ ಮನವಿ ಸಲ್ಲಿಸಿದರು.  

ಕ್ಷೇತ್ರದ ಹಲವು ಗ್ರಾಮಗಳ ಪ್ರಮುಖ ರಸ್ತೆ ಹಾಗೂ ಬೆಳ್ಳೂರು ಗ್ರಾಮದ ಮುಖ್ಯ ದ್ವಾರದಿಂದ ಕಮಠಾಣಾ ಗ್ರಾಮಕ್ಕೆ ತೆರಳುವ ರಸ್ತೆಯ ಕೆಲವು ಭಾಗಗಳು ದಟ್ಟ ಅರಣ್ಯ ಪ್ರದೇಶದ ಮೂಲಕ ಹಾದುಹೋಗುತ್ತವೆ. ಈ ಮಾರ್ಗಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡುಹಂದಿ, ಜಿಂಕೆ, ಕೃಷ್ಣಮೃಗ, ಮಂಗ ಸೇರಿದಂತೆ ವಿವಿಧ ಕಾಡುಪ್ರಾಣಿಗಳ ಸಂಚಾರ ಹೆಚ್ಚಾಗಿದೆ. ವಿಶೇಷವಾಗಿ ರಾತ್ರಿ ವೇಳೆ ಕಾಡುಪ್ರಾಣಿಗಳು ಏಕಾಏಕಿ ರಸ್ತೆ ದಾಟುತ್ತಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕರು ತಿಳಿಸಿದರು.  


ಸುದ್ದಿ ಓದಿ