ನಗರದಲ್ಲಿ ಪ್ರವಾಹ ಉಂಟಾಗದಂತೆ ಕ್ರಮ: ಸಚಿವ ಡಾ.ಎಂ.ಬಿ. ಪಾಟೀಲ
Measures to prevent flooding in the city: Minister Dr. M.B. Patil
ಲೋಕದರ್ಶನ ವರದಿ
ಮಣ್ಣು ಕುಸಿಯಬಾರೆಂದು ಪಿಚ್ಗ್ಚಿಂಗ್ ಕೆಲಸ ಕಾಮಗಾರಿಗೆ ಅಗತ್ಯ ಬಿದ್ದರೆ ಸಿಎಸ್ಸಾರ್ ಫಂಡ್: ಭರವಸೆ
ವಿಜಯಪುರ 26: ಕಳೆದ ವರ್ಷದ ಮಳೆಗಾಲದಲ್ಲಿ ನಗರದಲ್ಲಿ ಪ್ರವಾಹ ಉಂಟಾಗಿದ್ದರಿಂದ ಪ್ರವಾಹ ನಿಯಂತ್ರಣ ನಿಧಿಯಡಿ ಹಾಗೂ ಮಹಾನಗರ ಪಾಲಿಕೆ ವಿಜಯಪುರದಿಂದ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಗಳನ್ನು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಡಾ.ಎಂ.ಬಿ. ಪಾಟೀಲ ಶುಕ್ರವಾರ ಪರೀಶೀಲಿಸಿದರು. ನಗರದ ಶಿವಾಜಿ ವೃತ್ತದಲ್ಲಿ ಕೈಗೊಂಡ ಕಾಮಗಾರಿಗಳನ್ನು ಖುದ್ದು ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಕಳೆದ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರಿಂದ ನಗರದ ಕೆಲವು ಮನೆಗಳಲ್ಲಿ ನೀರು ನುಗ್ಗಿ ಹಾನಿಯಾಗಿತ್ತು. ಇದು ಮತ್ತೆ ಪುನರಾವರ್ತನೆಯಾಗಬಾರದೆಂದೇ ಕೋಟೆ ಗೋಡೆ ಕಂದಕ ಹಾಗೂ ಕಾಲುವೆಗಳ ಹೂಳು ತೆಗೆಯುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಕಂದಕಗಳಲ್ಲಿ ಮಣ್ಣು ಕುಸಿಯಬಾರೆಂದು ಪಿಚ್ಚಿಂಗ್ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಇದಕ್ಕೆಂದೇ 6 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೊಳ್ಳಲಾಗಿದೆ. ಕೆಲವು ಕಾಮಗಾರಿಗಳ ಬದಲಾವಣೆ ಮಾಡಿ ಈ ಕಾಮಗಾರಿಗೆ ಅನುದಾನ ಹೊಂದಾಣಿಕೆ ಮಾಡಲಾಗಿದೆ. ಬಿಡಿಎ ಹಾಗೂ ಪಾಲಿಕೆಯಿಂದ ಕಾಮಗಾರಿ ಬದಲಾವಣೆ ಮಾಡಿ ಅನುದಾನ ಒದಗಿಸಲಾಗುತ್ತಿದೆ. ಆದಾಗ್ಯೂ ಅಗತ್ಯ ಬಿದ್ದರೆ ನನ್ನ ಮತಕ್ಷೇತ್ರದ ಕೆಲ ಕಾಮಗಾರಿ ಬದಲಾವಣೆ ಮಾಡಿ ಇದಕ್ಕೆ ಅನುದಾನ ಕೊಡಿಸುವುದಾಗಿ ಸಚಿವರು ಹೇಳಿದರು. ಇನ್ನೂ ಅನುದಾನದ ಅಗತ್ಯ ಬಿದ್ದರೆ, ಯಾವುದಾದರೂ ಕಂಪನಿಯನ್ನು ಸಂಪರ್ಕಿಸಿ, ಆ ಕಂಪನಿಯ ಸಿಎಸ್ ಆರ್ ಅನುದಾನವನ್ನೂ ಕಾಮಗಾರಿಗೆ ಕೊಡಿಸುವುದಾಗಿ ಸಚಿವರು ಹೇಳಿದರು. ನಗರದಲ್ಲಿ ಅದೆಷ್ಟೇ ಮಳೆಯಾದರೂ ನಗರ ಭಾಗದಲ್ಲಿ ಪ್ರವಾಹ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು,ಕಂದಕ ಸೇರಿದಂತೆ ಇತರೆ ಸ್ಥಳಗಳಲ್ಲಿ ಶಾಶ್ವತವಾದ ಕಾಮಗಾರಿಗಳನ್ನು ಮಾಡಲಾಗುತ್ತಿದೆ ಎಂದರು.
ನಗರ ಭಾಗದ ರಸ್ತೆಗಳ ಕಾಮಗಾರಿಗೆ 150 ಕೋಟಿ ಹಣ ಮಂಜೂರು ಮಾಡಲಾಗಿದೆ. ಈ ಮೊತ್ತದಲ್ಲಿ ರಸ್ತೆಗಳ ಕೆಲಸ ಕಾಮಗಾರಿಗಳು ನಡೆಯುತ್ತವೆ ಎಂದ ಅವರು, ನಗರದಲ್ಲಿ ಪ್ರವಾಹ ತಡೆ ಕಾಮಗಾರಿ ಕೈಗೆತ್ತಿಕೊಂಡಿದ್ದಕ್ಕೆ ಪಾಲಿಕೆ ಸದಸ್ಯರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ಸಚಿವರು ಇದೇ ವೇಳೆ ಹೇಳಿದರು. ಕಳೆದ ಸಲ ಖುದ್ದಾಗಿ ವೀಕ್ಷಿಸಿದ್ದೆ.: ಶಿವಾಜಿ ವೃತ್ತದಿಂದ ಬಿದರಿ ಆಸ್ಪತ್ರೆಯವರೆಗೆ 3 ಕಿ.ಮೀ ಕಾಮಗಾರಿ ತೆಗೆದುಕೊಳ್ಳಲು ಸೂಚಿಸಲಾಗಿದೆ. ನಗರದ ಹೊರ ಭಾಗದಿಂದ ನೀರು ಒಳಗಡೆ ಬರುವುದನ್ನು ತಪ್ಪಿಸಲಿಕ್ಕೆ ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಎಷ್ಟೇ ಮಳೆಯಾದರೆ ನಗರದ ಜನತೆಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಸ್ವತಃ ಜಿಲ್ಲಾಧಿಕಾರಿ, ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಕಾಮಗಾರಿ ಉಸ್ತುವಾರಿ ನೋಡುತ್ತಿದ್ದಾರೆ ಎಂದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 