ಮಾಧ್ಯಮ ಅತ್ಯಂತ ನಿರ್ಣಾಯಕ ಪಾತ್ರವಹಿಸುತ್ತದೆ: ಹಾದಿಮನಿ
Media plays a very crucial role: Hadimani
ಲೋಕದರ್ಶನ ವರದಿ
‘ಅಭಿವೃದ್ಧಿಯ ಗುರಿಯನ್ನು ಸಾಧಿಸುವಲ್ಲಿ ಮಾಧ್ಯಮ ಪ್ರಮುಖ ಪಾತ್ರ ವಹಿಸುತ್ತದೆ’
ಮಾಂಜರಿ 13: ಭಾರತದ ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಸ್ಥಂಬ ಎಂದು ಕರೆಯಲ್ಪಡುವ ಮಾಧ್ಯಮವು ಅತ್ಯಂತ ನಿರ್ಣಾಯಕ ಪಾತ್ರವನ್ನುವಹಿಸುತ್ತದೆ. ಇದು ಜನರಿಗೆ ಮಾಹಿತಿ ನೀಡುವುದರ ಜೊತೆಗೆ ಸರಕಾರವನ್ನು ಉತ್ತಮ ದಾಯಿಯನ್ನಾಗಿ ಮಾಡುವುದು, ಜಾಗೃತಿ ಮೂಡಿಸುವುದು ಮತ್ತು ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸುವ ಮೂಲಕ ಮುಕ್ತ ಮತ್ತು ನ್ಯಾಯ ಸಮ್ಮತ ಸಮಾಜವನ್ನು ಉಳಿಸಿಕೊಳ್ಳಲು ಸಹಾಯಕಾರಿಯಾಗಿದೆ ಎಂದು ಉಪನ್ಯಾಸ ಸದಾಶಿವ ಹಾದಿಮನಿ ಹೇಳಿದರು.
ಅವರು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಕೆ. ಎಲ್. ಇ ಸಂಸ್ಥೆಯ ಪದವಿ ಮಹಾವಿದ್ಯಾಲಯ ದಲ್ಲಿ ಸೋಮವಾರ ರಂದು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ "ಪ್ರಜಾಪ್ರಭುತ್ವದಲ್ಲಿ ಮಾಧ್ಯಮದ ಪಾತ್ರ" ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರೊ. ಸದಾಶಿವ ಕೆ ಹಾದಿಮನಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಗೌರವಾನ್ವಿತ ಪ್ರಾಚಾರ್ಯರಾದ ಪ್ರೊ. ಎಂ. ಎಸ್. ಕಾನಡೆ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರೊ.ಶ್ರೀಮತಿ.ಪಿ.ಎ.ಕಾಟೆ ಅವರು ಎಲ್ಲರನ್ನು ಸ್ವಾಗತಿಸಿದರು. ಪ್ರೊ. ಎ. ಕೆ. ಪಾಟೀಲ್ ಅತಿಥಿಗಳನ್ನು ಪರಿಚಯಿಸಿದರು. ಕು. ನಾಗರಾಜ್ ಹೊಂಡಪ್ಪನವರ ವಂದಿಸಿದರು. ಕು. ಸುಹಾನ ಜಮಾದಾರ್ ನಿರೂಪಿಸಿದರು.ವಿದ್ಯಾರ್ಥಿಗಳು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 