ಹಾವೇರಿ

ಹಿರಿಯ ನಾಗರಿಕರ ವೈದ್ಯಕೀಯ ತಪಾಸಣಾ ಶಿಬಿರ

ಹಿರಿಯ ನಾಗರಿಕರ ವೈದ್ಯಕೀಯ ತಪಾಸಣಾ ಶಿಬಿರ

ಲೋಕದರ್ಶನ ವರದಿ 

            ಹಾವೇರಿ:ನ.16: ಕೆಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯ ಉಪಯೋಜನೆಯಾದ ಹಿರಿಯ ನಾಗರಿಕರ ರಾಜ್ಯ ಕ್ರೀಯಾ ಯೋಜನೆಯಡಿಯಲ್ಲಿ ಭಾರತ ಸರ್ಕಾರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಕರ್ನಾಟಕ ಸರ್ಕಾರ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,

              ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಆರೋಗ್ಯ ಮತ್ತು ವೈದ್ಯಕೀಯ ತಪಾಸಣಾ(ಮರೆವಿನ ಕಾಯಿಲೆ)  ಶಿಬಿರ ಇತ್ತೀಚೆಗೆ ಹಾವೇರಿ ನಗರದ ನಿವೃತ್ತ ನೌಕರರ ಭವನದಲ್ಲಿ ಜರುಗಿತು. 

ಹಿರಿಯ ಸಿವಿಲ್ ನ್ಯಾಯವಾದಿಗಳು ಹಾಗೂ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶ್ರೀಶೈಲಜಾ ಹೆಚ್‌. ವಿ  ಅವರು ಉದ್ಘಾಟನೆ ನೆರವೇರಿಸಿದರು.  

ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘ ಅಧ್ಯಕ್ಷ ಹೆಚ್‌. ಸಿ. ಸಿದ್ದನಗೌಡರ, ಪೆನಲ್ ವಕೀಲ ಸುರೇಶ ಸಜ್ಜನ, ಜಿಲ್ಲಾ ಆಸ್ಪತ್ರೆ ವೈದ್ಯ ಡಾ. ಶಾಂತವೀರ, ಡಾ. ಮಹೇಶ ಬಡ್ಡಿ, ಡಾ ಶೃತಿ ಎ., ಆಪ್ತ ಸಮಾಲೋಚಕ ಈರಣ್ಣ ಚೌಡಣ್ಣನವರ, ವೈಭವ ದುಂಡನಕೊಪ್ಪ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ, ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್‌. ಬಿ. ಅಣ್ಣಿಗೇರಿ ಇತರರು ಭಾಗವಹಿಸಿದ್ದರು. 


ಸುದ್ದಿ ಓದಿ