ಮಹಲಿಂಗಪುರ

ವೈದ್ಯರ ಸೇವೆ, ಪತ್ರಿಕಾ ಧರ್ಮ ಸಮಾಜದ ಅಮೂಲ್ಯ ಆಧಾರಸ್ತಂಭಗಳು: ಡಾ. ವಿನೋದ ಮೇತ್ರಿ

ವೈದ್ಯರ ಸೇವೆ, ಪತ್ರಿಕಾ ಧರ್ಮ ಸಮಾಜದ ಅಮೂಲ್ಯ ಆಧಾರಸ್ತಂಭಗಳು: ಡಾ. ವಿನೋದ ಮೇತ್ರಿ

ಲೋಕದರ್ಶನ ವರದಿ 

ಮಹಾಲಿಂಗಪುರ, 2: ಸಮಾಜದ ಆರೋಗ್ಯವನ್ನು ಕಾಪಾಡುವ ವೈದ್ಯರು ಮತ್ತು ಸಮಾಜಕ್ಕೆ ಸತ್ಯ ಹಾಗೂ ನೈಜ ಮಾಹಿತಿಯನ್ನು ತಲುಪಿಸುವ ಪತ್ರಕರ್ತರು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆನಿಸಿರುವ ಪತ್ರಿಕಾರಂಗವು ಕಾಯಾಂರ್ಗ, ಶಾಸಕಾಂಗ ಹಾಗೂ ನ್ಯಾಯಾಂಗಗಳು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಎಚ್ಚರಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ ಎಂದು ವೈಷ್ಣವಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ವಿನೋದ ಮೇತ್ರಿ ಹೇಳಿದರು. 

ಅವರು ಸ್ಥಳೀಯ ವೈಷ್ಣವಿ ಶಿಕ್ಷಣ ಸಂಸ್ಥೆಯ ಅಕ್ಷರ ವಿದ್ಯಾ ವಿಹಾರ ಮಾಡರ್ನ್‌ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವೈದ್ಯರ ದಿನ ಹಾಗೂ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರು ತಮ್ಮ ಜ್ಞಾನ, ಅನುಭವ ಮತ್ತು ಮಾನವೀಯ ಸೇವೆಯ ಮೂಲಕ ಸಾವಿರಾರು ಜೀವಗಳನ್ನು ರಕ್ಷಿಸುವ ಮಹತ್ತರ ಕಾರ್ಯ ಮಾಡುತ್ತಿದ್ದಾರೆ. ಕೊರೊನಾ ಸೇರಿದಂತೆ ವಿವಿಧ ಸಂಕಷ್ಟದ ಸಂದರ್ಭಗಳಲ್ಲಿ ವೈದ್ಯರು ತಮ್ಮ ಜೀವವನ್ನೇ ಪಣಕ್ಕಿಟ್ಟು ಜನಸೇವೆಯಲ್ಲಿ ತೊಡಗಿಕೊಂಡಿರುವುದು ಸಮಾಜ ಎಂದಿಗೂ ಮರೆಯಬಾರದು. ವೈದ್ಯರ ಸೇವೆ ಕೇವಲ ವೃತ್ತಿಯಲ್ಲ, ಅದು ಮಾನವೀಯತೆಯ ಪ್ರತೀಕವಾಗಿದೆ ಎಂದು ಅವರು ಹೇಳಿದರು. 


ಸುದ್ದಿ ಓದಿ