ಹೊಸಪೇಟೆ

ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗಳ ಸಭೆ

ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗಳ ಸಭೆ

ಜಿಲ್ಲಾದ್ಯಂತ ಪೌರಕಾರ್ಮಿಕರ ಸರ್ವೆ ಮಾಡಿ, ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್ 

ಹೊಸಪೇಟೆ(ವಿಜಯನಗರ) 29: ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್ ಅವರ ಅಧ್ಯಕ್ಷತೆಯಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ​‍್ಸ‌ಗಳ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ 2013 ಕ್ಕೆ ಸಂಬಂಧಿಸಿದಂತೆ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17ರಂತೆ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರದಂದು ನಡೆಯಿತು.  

ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್ ಅವರು ಎಲ್ಲಾ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಸುತ್ತಿರುವ ಪೌರಕಾರ್ಮಿಕರಿಗೆ ನಿವೇಶನ, ಕನಿಷ್ಠ ವೇತನ, ಇ.ಎಸ್‌.ಐ, ಪಿ.ಎಫ್ ಹಾಗೂ ವಿಮಾಕಂತುಗಳ ಪಾವತಿ ಕುರಿತು ಸಭೆಯಲ್ಲಿ ಚರ್ಚಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕ್ರಮವಹಿಸಲು ಈ ಸಂದರ್ಭದಲ್ಲಿ ಸೂಚಿಸಿದರು. 

ಹೊಸಪೇಟೆ ನಗರಸಭೆ, ಕಮಲಾಪುರ ಪಟ್ಟಣ ಪಂಚಾಯಿತಿ, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಹಾಗೂ ಕೊಟ್ಟೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶೌಚಾಲಯಗಳ ನಿರ್ವಹಣೆ ಮಾಡಲು ಶೀಘ್ರವಾಗಿ ಬಳಕೆದಾರರನ್ನು ನೇಮಿಸಲು ಕ್ರಮವಹಿಸಿ, ಇಲ್ಲವಾದಲ್ಲಿ ನಿಮ್ಮ ವಿರುದ್ದ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. 

ಜಿಲ್ಲೆಯ ಎಲ್ಲಾ ನಿವೇಶನ, ವಸತಿ ರಹಿತ ಪೌರಕಾರ್ಮಿಕರ ಸರ್ವೆ ಮಾಡಿ, ಹೊಸಬರ ಸೇರೆ​‍್ಡ ಅಥವಾ ಹೆಸರು ತಿದ್ದುಪಡಿಗಳಿದ್ದಲ್ಲಿ ಪೂರ್ಣಗೊಳಿಸಿ ಶೀಘ್ರವಾಗಿ ನಿವೇಶನ, ವಸತಿ ರಹಿತ ಪೌರಕಾರ್ಮಿಕರ ಪಟ್ಟಿಯನ್ನು ತಯಾರಿಸಿ ಸಂಬಂಧ ಪಟ್ಟ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮಾಹಿತಿಯನ್ನು ಕೂಡಲೇ ಸಲ್ಲಿಸಬೇಕು ಎಂದು ಅವರು ತಿಳಿಸಿದರು. 

ಈ ಹಿಂದೆ ಗುರುತಿಸಲಾದ ಜಿಲ್ಲೆಯ ಎಲ್ಲಾ ಗ್ರಾಮೀಣ ಭಾಗದಲ್ಲಿನ ಮ್ಯಾನುವಲ್ ಸ್ಕ್ಯಾವೆಂಜರ್‌ಗಳಿಗೆ ಸರ್ಕಾರದ ಕಡೆಯಿಂದ ಲಭ್ಯವಿರುವ ಸೌಲಭ್ಯಗಳ ಕುರಿತು ಜಾಹೀರಾತು, ಬೋರ್ಡ್‌, ಭಿತ್ತಿಪತ್ರಗಳ ಮುಖಾಂತರ ಜಾಗೃತಿ ಮೂಡಿಸಲು ತಿಳಿಸಿದರು.  

ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ಮಾಡಲಾಗಿದ್ದು, ಕೂಡ್ಲಿಗಿಯಿಂದ 51, ಕೊಟ್ಟೂರಿನಿಂದ 5, ಹಗರಿಬೊಮ್ಮನಹಳ್ಳಿ ಯಿಂದ 10 ಅರ್ಜಿಗಳು ಬಂದಿದ್ದು, ಹರಪನಹಳ್ಳಿ, ಹೂವಿನಹಡಗಲಿ, ಕಮಲಾಪುರ ಹಾಗೂ ಮರಿಯಮ್ಮನಹಳ್ಳಿಯಿಂದ ಅರ್ಜಿಗಳು ಬಂದಿರುವುದಿಲ್ಲ ಎಂದು ಸಫಾಯಿ ಕರ್ಮಚಾರಿಗಳ ನಾಮ ನಿರ್ದೇಶಿತ ಸದಸ್ಯ ರಾಮುಡು ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳು ಬಂದ ಅರ್ಜಿಗಳನ್ನು ಪರೀಶೀಲನೆ ಮಾಡಿ ಅಗತ್ಯ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. 

 ಕಮಲಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ನಿವೇಶನ ಕಲ್ಪಿಸಲಾಗಿದ್ದು, ಹಗರಿಬೊಮ್ಮನಹಳ್ಳಿ ಪುರಸಭೆ ವ್ಯಾಪ್ತಿಯ ಒಟ್ಟು 24 ಜನ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಿದ್ದು, 19 ಜನರಿಗೆ ನೀವೇಶನ ಮಂಜೂರು ಮಾಡಲಾಗಿದೆ. ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿಯಲ್ಲಿ 4ಜನರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಕೊಟ್ಟೂರು ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ 24 ಕಾಯಂ ಪೌರಕಾರ್ಮಿಕರಿದ್ದು, 14 ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಿದ್ದು, ಇನ್ನುಳಿದ 10 ಪೌರಕಾರ್ಮಿಕರಲ್ಲಿ 2 ಪೌರಕಾರ್ಮಿಕರು ಪ್ರಸ್ತಾವನೆ ಸಲ್ಲಿಸಬೇಕಾಗಿದೆ. 8ಜನ ಪೌರಕಾರ್ಮಿಕರಿಗೆ ನಿವೇಶನ ಇರುವುದಿಲ್ಲ. ಹೊಸಪೇಟೆ ನಗರಸಭೆ ವ್ಯಾಪ್ತಿಯ ನಿವೇಶನ ರಹಿತ ಪೌರಕಾರ್ಮಿಕರಿಗೆ ನಿವೇಶನ ನೀಡಲು ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು. 

ವಿಜಯನಗರ ಜಿಲ್ಲೆಯ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಮಾಸ್ಟರ್ ಹೆಲ್ತ್‌ ಚೆಕಪ್ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಿಸುವ ಸಂದರ್ಭದಲ್ಲಿ ಒಬ್ಬ ಪುರಷ ಡಾಕ್ಟರ್ ಹಾಗೂ ಒಬ್ಬ ಮಹಿಳಾ ಡಾಕ್ಟರ್ ವ್ಯವಸ್ಥೆಯನ್ನು ಕಲ್ಪಿಸಿ ಮಹಿಳೆಯರಿಗೆ ತಪಾಸಣಾ ಕೊಠಡಿಯ ಏರ​‍್ಾಡು ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಅವರು ತಿಳಿಸಿದರು. 

 ದೌರ್ಜನ್ಯ ತಡೆ ಕಾಯ್ದೆಯಡಿ ಹೊಸಪೇಟೆಯಲ್ಲಿ 01, ಹಡಗಲಿಯಲ್ಲಿ 02, ಕೂಡ್ಲಿಗಿಯಲ್ಲಿ 08, ಹರಪನಹಳ್ಳಿಯಲ್ಲಿ 01 ಪ್ರಕರಣಗಳು ಪೊಲೀಸ್ ತನಿಖೆಯಲ್ಲಿದ್ದು, ಕೂಡ್ಲಿಗಿಯಲ್ಲಿ 01 ಹಾಗೂ ಹಡಗಲಿಯಲ್ಲಿ 03 ಪ್ರಕರಣವು ಅಂತಿಮ ವರದಿಗೆ ಬಂದಿರುತ್ತವೆ ಎಂಬ ಮಾಹಿತಿಯನ್ನು ಹೊಸಪೇಟೆಯ ಉಪಪೊಲೀಸ್ ವಿಭಾಗಾಧಿಕಾರಿಯಿಂದ ಸಂಗ್ರಹಿಸಿರುವುದಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಬಹುತೇಕ ಪ್ರಕರಣಗಳು ನ್ಯಾಯಾಲಯದಲ್ಲಿ ಬಗೆಹರಿಯದೇ ಇದ್ದು, ಇದಕ್ಕೆ ಸಂಬಂಧಪಟ್ಟ ಪ್ರಾಸುಕ್ಯುಷನ್ ಮಾಡುವವರು ಇಲ್ಲಿಯವರೆಗೂ ಯಾವುದೇ ಸಭೆಗೆ ಹಾಜರಾಗದಿದ್ದು, ಮುಂದಿನ ಸಭೆಗೆ ಹಾಜರಾಗುವಂತೆ ಕ್ರಮವಹಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು. 

 ಈ ಸಂದರ್ಭದಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವೀರನಗೌಡ, ತಾಲೂಕು ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಗಾಧಿಲಿಂಗಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. 


ಸುದ್ದಿ ಓದಿ