ಆಯಿಲ್ ಕಂಪನಿ ಮಾರಾಟಾಧಿಕಾರಿಗಳು, ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಪ್ರತಿನಿಧಿಗಳ ಸಭೆ
Meeting of representatives of oil company sales officers and petrol station owners' association
ಲೋಕದರ್ಶನ ವರದಿ
ವಿಜಯಪುರ 25 : ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡಿಸೈಲ್ ಸಮರ್ಕವಾಗಿ ಸರಬರಾಜಾಗುತ್ತಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಎಲ್ಲ ಆಯಿಲ್ ಕಂಪನಿಯ ಮಾರಾಟಾಧಿಕಾರಿಗಳು ಹಾಗೂ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತೈಲ ಪೂರೈಕೆ ವಿಷಯದಲ್ಲಿ ಕಂಪನಿಗಳು ಜಾಗರೂಕತೆ ವಹಿಸಿ, ಸಮಸ್ಯೆ ಬಾರದ ರೀತಿಯಲ್ಲಿ ಇಂಧನ ಪೂರೈಸಬೇಕು ಎಂದರು.
ಉಳಿದ ಎಲ್ಲ ಪೆಟ್ರೋಲ್ ಪಂಪ್‌ಗಳಲ್ಲಿ ಅಗತ್ಯತೆಗೆ ಅನುಸಾರವಾಗಿ ತೈಲ ಲಭ್ಯವಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಇನ್ನೊಂದೆಡೆ ಜಿಲ್ಲೆಯ ಜನತೆ ಗಾಬರಿಯಾಗುವ ಅವಶ್ಯಕತೆ ಇಲ್ಲ. ಆದರೆ ಅವಶ್ಯಕತೆ ಅನುಸಾರ ಮಾತ್ರವೇ ಇಂಧನ ಪಡೆದುಕೊಳ್ಳಬೇಕು ಎಂಬುದನ್ನು ಜಿಲ್ಲಾಧಿಕಾರಿ ಇದೇ ವೇಳೆ ಸಾರ್ವಜನಿಕರಿಗೂ ಸಲಹೆ ಮಾಡಿದರು. ಜಿಲ್ಲೆಗೆ ವಿವಿಧ ತೈಲ ಕಂಪನಿ ವಿತರಕರು ಸಮರ್ಕವಾಗಿ ಪೆಟ್ರೋಲ್ ಮತ್ತು ಡಿಸೈಲ್ ಪೂರೈಸಬೇಕು. ಎಲ್ಲ ಬಂಕ್ ಮಾಲೀಕರು ದೈನಂದಿನ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.ಸಾರ್ವಜನಿಕರ ಬೇಡಿಕೆಯಅನುಸಾರ ಇಂಧನ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಾರಾಟಗಾರರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಇನ್ನೊಂದೆಡೆ ಮುಂಗಾರು ಆರಂಭವಾಗಿದೆ.ಏಳುವರೆ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರ ಉಳುಮೆ ಕಾರ್ಯ ನಡೆಯುತ್ತಿದೆ. ಹಾಗಾಗಿ ರೈತರಿಗೆ ಯಾವುದೇ ಅನಾನುಕೂಲ ಹಾಗೂ ಸಮಸ್ಯೆಯಾಗದಂತೆ ಇಂಧನ ಪೂರೈಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ನಿಗಾ ವಹಿಸಬೇಕು ಎಂದ ಅವರು, ಜಿಲ್ಲಾಡಳಿತ ಸ್ಪ್ರೆಡ್ ಶೀಟ್ ನಲ್ಲಿ ದೈನಂದಿನ ಮಾಹಿತಿ ಕ್ರೋಢಿಕರಿಸುತ್ತದೆ ಎಂದರು.
ತೈಲ ಕಂಪನಿ ಪ್ರತಿನಿಧಿಗಳು ಮಾತನಾಡಿ, ಜಿಲ್ಲೆಯಲ್ಲಿ ಇಂಧನದ ಕೊರತೆ ಇರುವುದಿಲ್ಲ ಎಂದು ಸ್ಪಷ್ಟಪಡಿಸುವುದರ ಜೊತೆಗೆ ಇಂಡೆಂಟ್ ಅನುಗುಣವಾಗಿ ಇಂಧನ ಪೂರೈಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಗ್ರಾಹಕರಿಗೆ ತೈಲ ವಿತರಣೆ ಮಾಡುವಾಗ ಯಾವುದೇ ವ್ಯತ್ಯಾಸವಾಗದಂತೆ ನಿಯಮಾನುಸಾರ, ಪ್ರಮಾಣಬದ್ಧವಾಗಿ ಮತ್ತು ಪಾರದರ್ಶಕವಾಗಿ ವಿತರಿಸಲು ಸಭೆಯಲ್ಲಿ ಸೂಚಿಸಲಾಯಿತು. ಗ್ರಾಹಕರ ಹಿತರಕ್ಷಣೆ, ಇಂಧನ ಸುರಕ್ಷತೆ ಮತ್ತು ನಿಯಮಾವಳಿಗಳ ಪಾಲನೆ ಕುರಿತು ಚರ್ಚೆ ನಡೆಸಲಾಯಿತು. ಪ್ರತಿ ಪೆಟ್ರೋಲ್ ಪಂಪಿನಲ್ಲಿ ಪ್ರತಿದಿನ ಲಭ್ಯವಿರುವ ಇಂಧನದ ದಾಸ್ತಾನು ಹಾಗೂ ದರದ ಮಾಹಿತಿಯನ್ನು ಗ್ರಾಹಕರಿಗೆ ಕಾಣುವಂತೆ ಕಡ್ಡಾಯವಾಗಿ ಪ್ರದರ್ಶಿಸಲು ಸೂಚಿಸಲಾಯಿತು.
ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಅವರು ಮಾತನಾಡಿ, ಜಿಲ್ಲೆಯ ಸರ್ಕಾರಿ ಸ್ವಾಮ್ಯದ ಬಿಪಿಸಿಎಲ್ 71, ಐಒಸಿಎಲ್ 135, ಎಚ್ ಪಿಸಿಎಲ್ 74 ಇದ್ದು, ಜಿಯೋಬಿಪಿ 12, ಎಂಆರ್.ಪಿಎಲ್ 02 ಹಾಗೂ ನಾಯರ 18 ಒಳಗೊಂಡಂತೆ ಒಟ್ಟು 312 ಪೆಟ್ರೋಲ್ ಬಂಕ್ ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಸಭೆಗೆ ಮಾಹಿತಿ ನೀಡಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 