ಬೆಳಗಾವಿ

ಎಸ್‌.ಸಿ-ಎಸ್‌.ಟಿ ಜಿಲ್ಲಾ ಜಾಗೃತಿ (ದೌರ್ಜನ್ಯ ನಿಯಂತ್ರಣ) ಮತ್ತು ಉಸ್ತುವಾರಿ ಸಮಿತಿ ಸಭೆ

ಎಸ್‌.ಸಿ-ಎಸ್‌.ಟಿ ಜಿಲ್ಲಾ ಜಾಗೃತಿ (ದೌರ್ಜನ್ಯ ನಿಯಂತ್ರಣ) ಮತ್ತು ಉಸ್ತುವಾರಿ ಸಮಿತಿ ಸಭೆ

ಲೋಕದರ್ಶನ ವರದಿ 

ಬೆಳಗಾವಿ 30: ಸಾರ್ವಜನಿಕ ಸ್ಮಶಾನ ಭೂಮಿ ಒದಗಿಸುವ ಉದ್ದೇಶದಿಂದ ಪ್ರತಿ ಗ್ರಾಮದಲ್ಲಿ ಕನಿಷ್ಠ ಎರಡು ಎಕರೆ ಸರ್ಕಾರಿ ಭೂಮಿಯನ್ನು ಗುರುತಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಸೆ.30) ನಡೆದ ಎಸ್‌.ಸಿ-ಎಸ್‌.ಟಿ ಜಿಲ್ಲಾ ಜಾಗೃತಿ (ದೌರ್ಜನ್ಯ ನಿಯಂತ್ರಣ) ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಕನಿಷ್ಠ ಎರಡು ಎಕರೆ ಭೂಮಿ ಅಗತ್ಯವಿದೆ. ಆದ್ದರಿಂದ ಉಪವಿಭಾಗಾಧಿಕಾರಿಗಳು, ಆಯಾ ತಾಲೂಕಿನ ತಹಶೀಲ್ದಾರರು ಲಭ್ಯವಿರುವ ಸರ್ಕಾರಿ ಭೂಮಿಯನ್ನು ಪರೀಶೀಲಿಸಿ, ಸೂಕ್ತ ಸ್ಥಳವನ್ನು ಗುರುತಿಸಿ ವರದಿ ಸಲ್ಲಿಸಬೇಕು ಎಂದು ಹೇಳಿದರು. 


ಸುದ್ದಿ ಓದಿ